ಮಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದಕ್ಷಿಣ ಕನ್ನಡದಲ್ಲಿ ದೀಪಕ್ ರಾವ್,ಫಾಜೀಲ್,ಜಲೀಲ್,ಮಸೂದ್ ಹತ್ಯೆ ಪ್ರಕರಣದ ಮರುತನಿಖೆಗೆ ಆದೇಶ ನೀಡಬೇಕು ಮತ್ತು ಎಲ್ಲಾ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಹಲವು ಸಂಘಟನೆಗಳ ಮೂಲಕ ಒತ್ತಾಯಿಸಲಾಗಿತ್ತು.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎರಡು ದಿನ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಮಂಗಳೂರಿಗೆ ಆಗಮಿಸಿದ ಅವರು ದಕ್ಷಿಣ ಕನ್ನಡದಲ್ಲಿ ನಡೆದಿದ್ದ ದೀಪಕ್ ರಾವ್,ಫಾಜೀಲ್,ಜಲೀಲ್,ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಮತ್ತು ಪರಿಹಾರ ನೀಡಲು ಬೇಕಾದ ವರದಿ ನೀಡಲು ಸೂಚಿಸಿದ್ದೇನೆ ಎಂದರು.
ಆದಷ್ಟು ಶೀಘ್ರದಲ್ಲಿ ಸರ್ಕಾರ ಈ ಕುಟುಂಬಗಳಿಗೆ ಪರಿಹಾರ ನೀಡಲಿದೆ. ಈ ವೇಳೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಡ್ರಗ್ಸ್ ಮಾಫಿಯಾ ತಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು. ಅಗಸ್ಟ್ 15 ರೊಳಗೆ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುಯವುದಾಗಿ ಭರವಸೆ ನೀಡಿದರು.
ಅಶಾಂತಿ ಸೃಷ್ಠಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ, ಇಲ್ಲಿನ ವಿದ್ಯಾರ್ಥಿಗಳು ಯುವಕರು ನಮ್ಮ ಜೊತೆ ಕೈ ಜೋಡಿಸಿ ಮಂಗಳೂರಿನಲ್ಲಿ ಶಾಂತಿ-ಸಾಮರಸ್ಯವನ್ನು ಕಟ್ಟಲು ಸಹಕರಿಸಿ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…