Featured

ಹತ್ಯೆಯಾದ ದೀಪಕ್ ರಾವ್, ಫಾಜೀಲ್, ಜಲೀಲ್, ಮಸೂದ್ ಕುಟುಂಬಕ್ಕೆ ಪರಿಹಾರ : ಗೃಹ ಸಚಿವ ಭರವಸೆ – Vishwanews24

ಅಗಸ್ಟ್ 15 ರೊಳಗೆ ಮಾಫಿಯಾ ವಿರುದ್ಧ ಕ್ರಮ : ಗೃಹ ಸಚಿವ ಡಾ. ಜಿ. ಪರಮೇಶ್ವರ್

ಮಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದಕ್ಷಿಣ ಕನ್ನಡದಲ್ಲಿ ದೀಪಕ್ ರಾವ್,ಫಾಜೀಲ್,ಜಲೀಲ್,ಮಸೂದ್ ಹತ್ಯೆ ಪ್ರಕರಣದ ಮರುತನಿಖೆಗೆ ಆದೇಶ ನೀಡಬೇಕು ಮತ್ತು ಎಲ್ಲಾ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಹಲವು ಸಂಘಟನೆಗಳ ಮೂಲಕ ಒತ್ತಾಯಿಸಲಾಗಿತ್ತು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎರಡು ದಿನ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದು, ಈಗಾಗಲೇ ಮಂಗಳೂರಿಗೆ ಆಗಮಿಸಿದ ಅವರು ದಕ್ಷಿಣ ಕನ್ನಡದಲ್ಲಿ ನಡೆದಿದ್ದ ದೀಪಕ್ ರಾವ್,ಫಾಜೀಲ್,ಜಲೀಲ್,ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಮತ್ತು ಪರಿಹಾರ ನೀಡಲು ಬೇಕಾದ ವರದಿ ನೀಡಲು ಸೂಚಿಸಿದ್ದೇನೆ ಎಂದರು.

ಆದಷ್ಟು ಶೀಘ್ರದಲ್ಲಿ ಸರ್ಕಾರ ಈ ಕುಟುಂಬಗಳಿಗೆ ಪರಿಹಾರ ನೀಡಲಿದೆ. ಈ ವೇಳೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಡ್ರಗ್ಸ್ ಮಾಫಿಯಾ ತಡೆಯಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದರು. ಅಗಸ್ಟ್ 15 ರೊಳಗೆ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುಯವುದಾಗಿ ಭರವಸೆ ನೀಡಿದರು.

ಅಶಾಂತಿ ಸೃಷ್ಠಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ, ಇಲ್ಲಿನ ವಿದ್ಯಾರ್ಥಿಗಳು ಯುವಕರು ನಮ್ಮ ಜೊತೆ ಕೈ ಜೋಡಿಸಿ ಮಂಗಳೂರಿನಲ್ಲಿ ಶಾಂತಿ-ಸಾಮರಸ್ಯವನ್ನು ಕಟ್ಟಲು ಸಹಕರಿಸಿ ಎಂದು ಮಂಗಳೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

5 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

5 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago