Featured

ಹತ್ರಾಸ್‌ ದುರಂತ : ಮೃತರ ಕುಟುಂಬಗಳಿಗೆ ತಲಾ 4 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ; ಪ್ರಕರಣ ಎಸ್‌ಐಟಿ ತನಿಖೆಗೆ : ಯೋಗಿ ಆದಿತ್ಯನಾಥ್‌ – vishwanews24

ಮೃತರ ಕುಟುಂಬಗಳಿಗೆ ತಲಾ 4 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ; ಪ್ರಕರಣ ಎಸ್‌ಐಟಿ ತನಿಖೆಗೆ : ಯೋಗಿ ಆದಿತ್ಯನಾಥ್‌

ಲಕ್ನೋ: ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌  ಅವರು ಪರಿಹಾರದ ಮೊತ್ತದಲ್ಲಿ ಹೆಚ್ಚಳ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಘಟನೆಯ ತನಿಖೆಯನ್ನು ವಿಶೇಷ ತನಿಖಾ ತಂಡ ಗೆ ನೀಡುವುದಾಗಿ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ಭಕ್ತರ ರಕ್ಷಣೆ ಮತ್ತು ಸುರಕ್ಷತೆಗೆ ಒತ್ತು ನೀಡುವುದು ನಮ್ಮ ಆದ್ಯತೆಯಾಗಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಪೈಕಿ 121 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಯುಪಿ, ಹರಿಯಾಣ, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಭಕ್ತರು ಈ ಕಾರ್ಯಕ್ರಮಕ್ಕೆ ಬಂದಿದ್ದರು. ಸದ್ಯ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇಕ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.

ಆಗ್ರಾ ಎಡಿಜಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಿದ್ದೇವೆ. ಈ ತಂಡ ಪ್ರಾಥಮಿಕ ವರದಿ ಸಲ್ಲಿಸಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ. ಅಲ್ಲದೆ ರಾಜ್ಯ ಸರ್ಕಾರವು ನ್ಯಾಯಾಂಗ ತನಿಖೆ ನಡೆಸಲು ನಿರ್ಧರಿಸಿದೆ. ಇದರ ನೇತೃತ್ವವನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ವಹಿಸಲಿದ್ದಾರೆ. ಆಡಳಿತ ಮತ್ತು ಪೊಲೀಸ್‌ನ ನಿವೃತ್ತ ಹಿರಿಯ ಅಧಿಕಾರಿಗಳು ಸಹ ಭಾಗವಾಗಲಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಈ ಘಟನೆಯಲ್ಲಿ ಸಂತ್ರಸ್ತರಾದ ಶಾಲಾ ವಿದ್ಯಾರ್ಥಿಗಳಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಲಾಗುವುದು. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂಪಾಯಿ ನೀಡಲಾಗುವುದು ಎಂದು ಯೋಗಿ ಆದಿತ್ಯನಾಥ್‌ ತಿಳಿಸಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

4 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago