Featured

ಹದಿಹರೆಯದ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ: ಡಾ. ರವಿಪ್ರಸಾದ್ ಹೆಗ್ಡೆ ಅಭಿಮತ – Vishwanews24

ಹದಿಹರೆಯದ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ: ಡಾ. ರವಿಪ್ರಸಾದ್ ಹೆಗ್ಡೆ ಅಭಿಮತ – Vishwanews24

ಹದಿಹರೆಯವು ಜೀವನದ ಅತ್ಯಂತ ಪ್ರಮುಖ ಘಟ್ಟ. ಈ ಹಂತದಲ್ಲಿ ಮಕ್ಕಳಲ್ಲಿ ಮಹತ್ತರವಾದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳು ಕಂಡುಬರುತ್ತವೆ.

ಶಿಕ್ಷಕರು ಹಾಗೂ ಪೋಷಕರ ಮಾರ್ಗದರ್ಶನದಲ್ಲಿ ಸೂಕ್ತ ಗುರಿಗಳನ್ನು ಹಾಕಿಕೊಂಡು ಶಿಸ್ತು ಮತ್ತು ನಿಷ್ಠೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗಿಕೊಂಡರೆ ಯಶಸ್ಸು ಸಾಧ್ಯ. ವೈಫಲ್ಯಗಳಿಂದ ಹತಾಶರಾಗದೇ ಆತ್ಮವಿಶ್ವಾಸದಿಂದ ಗುರಿಗಳನ್ನು ಸಾಧಿಸುವ ಛಲ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ವಿದ್ಯಾಗಿರಿಯ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ನಾತಕೋತ್ತರ ವಿಭಾಗದ ಡೀನ್ ಡಾ. ರವಿಪ್ರಸಾದ್ ಹೆಗ್ಡೆ ತಿಳಿಸಿದರು.

ಅವರು ಕುತ್ಯಾರಿನ ಸೂರ್ಯಚೈತನ್ಯ ಹೈಸ್ಕೂಲ್‌ನಲ್ಲಿ ನಡೆದ “ಹದಿಹರೆಯದ ತಲ್ಲಣಗಳು: ಒಂದು ಶೈಕ್ಷಣಿಕ ಸಂವಾದ” ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ತಮ್ಮ ಉಪನ್ಯಾಸದಲ್ಲಿ ಅನೇಕ ಪ್ರಸಿದ್ಧ ವ್ಯಕ್ತಿಗಳ ಉದಾಹರಣೆಗಳನ್ನು ನೀಡಿದ ಡಾ. ಹೆಗ್ಡೆ ಅವರು ಶಿಸ್ತು ಪರಿಪಾಲನೆ
ಹಾಗೂ ಮೌಲ್ಯಾಧಾರಿತ ಜೀವನಕ್ಕೆ ಒತ್ತು ನೀಡುವಂತೆ ವಿದ್ಯಾರ್ಥಿಗಳಿಗೆ ಕರೆಯಿತ್ತರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಎ.ಕೆ. ವಿದ್ಯಾರ್ಥಿ-ಶಿಕ್ಷಕರು- ಪೋಷಕರ ಸಹಭಾಗಿತ್ವದಿಂದ ಯಶಸ್ವಿ ಶಿಕ್ಷಣ ವ್ಯವಸ್ಥೆಯ ನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಬಹುಮುಖ್ಯ ವಿಷಯದ ಕುರಿತು ಸಂವಾದ ಕಾರ್ಯಕ್ರಮ ಸಂಯೋಜಿಸಿದ ಸೂರ್ಯಚೈತನ್ಯ ವಿದ್ಯಾಸಂಸ್ಥೆಯನ್ನು ಶ್ಲಾಘಿಸಿದ ಅವರು ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಕುರಿತು ಮಾತನಾಡಿದರು ಶಿರ್ವ ರೋಟರಿ ಕ್ಲಬ್‌ನ ಅಧ್ಯಕ್ಷ ಜಯಕೃಷ್ಣ ಆಳ್ವ, ಕಾರ್ಯದರ್ಶಿ ಜಿನೇಶ್ ಬಲ್ಲಾಳ್, ಪುಂಡಲೀಕ ಮರಾಠೆ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ವಿದ್ವಾನ್ ಶಂಭುದಾಸ

ಗುರೂಜಿ ಶುಭಹಾರೈಸಿದರು. ಪ್ರಾಂಶುಪಾಲ ಗುರುದತ್ತ ಸೋಮಯಾಜಿ ಅತಿಥಿಗಳನ್ನು ಸ್ವಾಗತಿಸಿ, ಶಿಕ್ಷಕಿ ರಾಜಲಕ್ಷಿö್ಮ ಪರಿಚಯಿಸಿದರು. ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿ ಸಂಗೀತಾ ರಾವ್ ವಂದಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago