ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು : ಕಾಂಗ್ರೆಸ್–ಜೆಡಿಎಸ್ ಮೈತ್ರಿ ಕುರಿತು ಸಿದ್ದರಾಮಯ್ಯ ಅಸಮಾಧಾನ -Vishwanews24
ಬೆಂಗಳೂರು: ‘ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ?’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್–ಜೆಡಿಎಸ್ ಮೈತ್ರಿ ಕುರಿತು ಅಸಮಾಧಾನ ಪ್ರಕಟಿಸಿದ್ದಾರೆ.
‘ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಮತ್ತು ಮಂಡ್ಯಗಳಲ್ಲಿ ಜೆಡಿಎಸ್ ಸೋಲಿಗೆ ಹಾಗೂ ಕೋಲಾರದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಸಾಕಿದ ಮುದ್ದಿನ ಗಿಣಿಗಳು ಕುಕ್ಕಿದ್ದೇ ಕಾರಣ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ನೇರ ಆರೋಪ ಮಾಡಿದ್ದರು. ಇದಕ್ಕೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
’ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು. ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ?‘ ಎಂದು ಟ್ವೀಟಿಸಿದ್ದಾರೆ.
ಹೌದು, @hd_kumaraswamy ಅವರೇ,
ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು,
ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು.
ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ?@INCKarnataka— Siddaramaiah (@siddaramaiah) September 24, 2019
