Featured

ಹನಿ ನೀರಾವರಿ ಸಹಾಯಧನಕ್ಕೆ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ – Vishwanews24

ಹನಿ ನೀರಾವರಿ ಸಹಾಯಧನಕ್ಕೆ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

ಬೆಂಗಳೂರು : ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿ ನೀರಾವರಿ (PMKSY-PDMC). ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ಸಹಾಯಧನಕ್ಕಾಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಪ್ರಥಮ 2 ಹೆಕ್ಟೇರ್‌ಗೆ ಮಾರ್ಗಸೂಚಿಯನ್ವಯ ನಿಗಧಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನವನ್ನು ನೀಡಲಾಗುವುದು. 2 ಹೆಕ್ಟೇರ್‌ಗೆ ಮೇಲ್ಪಟ್ಟು 5 ಹೆಕ್ಟೇರ್‌ವರೆಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್‌ವರೆಗೆ ಸಹಾಯಧನವನ್ನು ನೀಡಲಾಗುವುದು). ಸದರಿ ಸೌಲಭ್ಯವನ್ನು ಪ್ರತಿ ಫಲಾನುಭವಿಗೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.

ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ/ತಾಲ್ಲೂಕು ಕಛೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿನೀರಾವರಿ ಅಳವಡಿಸಲು ನಿಗಧಿತ ಅರ್ಜಿಯನ್ನು ಪಡೆಯುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೊಡ್ಡಬಳ್ಳಾಪುರ-080-27623770/ 9880210892, ದೇವನಹಳ್ಳಿ-080-27681204/ 9448825101, ಹೊಸಕೋಟೆ-080-27904760/ 8217210320, ನೆಲಮಂಗಲ-080-27726213/ 9880461607 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

13 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

14 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

15 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

15 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

15 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

15 hours ago