ಬೆಂಗಳೂರು : ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿ ನೀರಾವರಿ (PMKSY-PDMC). ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ಸಹಾಯಧನಕ್ಕಾಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಪ್ರಥಮ 2 ಹೆಕ್ಟೇರ್‌ಗೆ ಮಾರ್ಗಸೂಚಿಯನ್ವಯ ನಿಗಧಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನವನ್ನು ನೀಡಲಾಗುವುದು. 2 ಹೆಕ್ಟೇರ್‌ಗೆ ಮೇಲ್ಪಟ್ಟು 5 ಹೆಕ್ಟೇರ್‌ವರೆಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್‌ವರೆಗೆ ಸಹಾಯಧನವನ್ನು ನೀಡಲಾಗುವುದು). ಸದರಿ ಸೌಲಭ್ಯವನ್ನು ಪ್ರತಿ ಫಲಾನುಭವಿಗೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ/ತಾಲ್ಲೂಕು ಕಛೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿನೀರಾವರಿ ಅಳವಡಿಸಲು ನಿಗಧಿತ ಅರ್ಜಿಯನ್ನು ಪಡೆಯುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೊಡ್ಡಬಳ್ಳಾಪುರ-080-27623770/ 9880210892, ದೇವನಹಳ್ಳಿ-080-27681204/ 9448825101, ಹೊಸಕೋಟೆ-080-27904760/ 8217210320, ನೆಲಮಂಗಲ-080-27726213/ 9880461607 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…