ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

Featured, ದಕ್ಷಿಣ ಕನ್ನಡ

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ , ಡಿಜೆ ಸಂಪೂರ್ಣ ನಿಷೇಧ

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮುಂಬರುವ ಈದ್ ಮಿಲಾದ್, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ನವರಾತ್ರಿ ಶಾರದಾ ಮಹೋತ್ಸವ, ದೀಪಾವಳಿ ಹಾಗೂ ಕ್ರಿಸ್‌ಮಸ್ ಸೇರಿದಂತೆ ಸಾಲು ಸಾಲು ಸಾರ್ವಜನಿಕ ಉತ್ಸವಗಳು ಮತ್ತು ಮೆರವಣಿಗೆಗಳು ನಡೆಯಲಿದ್ದು, ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದೆ.

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಯಾವುದೇ ಸಾರ್ವಜನಿಕ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಸಲು ಪೊಲೀಸ್ ಇಲಾಖೆಯ ಲಿಖಿತ ಅನುಮತಿ ಕಡ್ಡಾಯವಾಗಿದ್ದು, ರಾತ್ರಿ 11:30 ಗಂಟೆಯ ನಂತರ ಮೆರವಣಿಗೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ಡಿಜೆ ಹಾಗೂ ಅತ್ಯಧಿಕ ಶಬ್ದ ಹೊರಸೂಸುವ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಅನುಮತಿ ಪಡೆದ ಧ್ವನಿವರ್ಧಕಗಳನ್ನು ರಾತ್ರಿ 10:00 ಗಂಟೆಯೊಳಗೆ ಸ್ಥಗಿತಗೊಳಿಸಬೇಕಾಗಿದೆ. ಸಾರ್ವಜನಿಕ ಕಾರ್ಯಕ್ರಮ ಸ್ಥಳಗಳಲ್ಲಿ 24×7 ಭದ್ರತೆ, ಸಿಸಿಟಿವಿ ಕ್ಯಾಮೆರಾಗಳ ಕಡ್ಡಾಯ ಅಳವಡಿಕೆ, ದ್ವೇಷ ಭಾಷಣ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸೋಶಿಯಲ್ ಮೀಡಿಯಾ ಪೋಸ್ಟ್‌ಗಳ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ.

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ಇದರೊಂದಿಗೆ ಮಹಿಳೆಯರ ಸುರಕ್ಷತೆ, ಅಗ್ನಿಶಾಮಕ ವ್ಯವಸ್ಥೆ, ವಾಹನ ಸಂಚಾರ ಸುಗಮಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಹಾಗೂ ಅನುಮತಿ ರಹಿತ ಡ್ರೋನ್ ಬಳಕೆಯ ನಿಷೇಧ ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದ್ದು, ನಿಯಮ ಮೀರುವ ಆಯೋಜಕರು ಹಾಗೂ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೇರಿದಂತೆ ವಿವಿಧ ಕಾಯ್ದೆಗಳಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಎಚ್ಚರಿಸಿದ್ದಾರೆ.

Leave a Reply