ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಮುಂಬರುವ ಈದ್ ಮಿಲಾದ್, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ನವರಾತ್ರಿ ಶಾರದಾ ಮಹೋತ್ಸವ, ದೀಪಾವಳಿ ಹಾಗೂ ಕ್ರಿಸ್‌ಮಸ್ ಸೇರಿದಂತೆ ಸಾಲು ಸಾಲು ಸಾರ್ವಜನಿಕ ಉತ್ಸವಗಳು ಮತ್ತು ಮೆರವಣಿಗೆಗಳು ನಡೆಯಲಿದ್ದು, ಜಿಲ್ಲಾ ಪೊಲೀಸ್ ಇಲಾಖೆಯು ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದೆ.
ಯಾವುದೇ ಸಾರ್ವಜನಿಕ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಸಲು ಪೊಲೀಸ್ ಇಲಾಖೆಯ ಲಿಖಿತ ಅನುಮತಿ ಕಡ್ಡಾಯವಾಗಿದ್ದು, ರಾತ್ರಿ 11:30 ಗಂಟೆಯ ನಂತರ ಮೆರವಣಿಗೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ, ಡಿಜೆ ಹಾಗೂ ಅತ್ಯಧಿಕ ಶಬ್ದ ಹೊರಸೂಸುವ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಅನುಮತಿ ಪಡೆದ ಧ್ವನಿವರ್ಧಕಗಳನ್ನು ರಾತ್ರಿ 10:00 ಗಂಟೆಯೊಳಗೆ ಸ್ಥಗಿತಗೊಳಿಸಬೇಕಾಗಿದೆ. ಸಾರ್ವಜನಿಕ ಕಾರ್ಯಕ್ರಮ ಸ್ಥಳಗಳಲ್ಲಿ 24×7 ಭದ್ರತೆ, ಸಿಸಿಟಿವಿ ಕ್ಯಾಮೆರಾಗಳ ಕಡ್ಡಾಯ ಅಳವಡಿಕೆ, ದ್ವೇಷ ಭಾಷಣ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸೋಶಿಯಲ್ ಮೀಡಿಯಾ ಪೋಸ್ಟ್‌ಗಳ ಮೇಲೆ ಸಂಪೂರ್ಣ ನಿಷೇಧ ಹೇರಲಾಗಿದೆ.
ಇದರೊಂದಿಗೆ ಮಹಿಳೆಯರ ಸುರಕ್ಷತೆ, ಅಗ್ನಿಶಾಮಕ ವ್ಯವಸ್ಥೆ, ವಾಹನ ಸಂಚಾರ ಸುಗಮಗೊಳಿಸುವುದು ಮತ್ತು ಶಸ್ತ್ರಾಸ್ತ್ರ ಹಾಗೂ ಅನುಮತಿ ರಹಿತ ಡ್ರೋನ್ ಬಳಕೆಯ ನಿಷೇಧ ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದ್ದು, ನಿಯಮ ಮೀರುವ ಆಯೋಜಕರು ಹಾಗೂ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೇರಿದಂತೆ ವಿವಿಧ ಕಾಯ್ದೆಗಳಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಎಚ್ಚರಿಸಿದ್ದಾರೆ.
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…