Featured

ಹರಿಪ್ರಸಾದ್ ಹೇಳಿಕೆ ಸಂಪೂರ್ಣ ನಾಚಿಕೆಗೇಡು : ಶೋಭಾ ಕರಂದ್ಲಾಜೆ ಆಕ್ರೋಶ – Vishwanews24

ಹರಿಪ್ರಸಾದ್ ಹೇಳಿಕೆ ಸಂಪೂರ್ಣ ನಾಚಿಕೆಗೇಡು : ಶೋಭಾ ಕರಂದ್ಲಾಜೆ ಆಕ್ರೋಶ

ಬೆಂಗಳೂರು : ಪಾಕಿಸ್ತಾನ  ಶತ್ರು ರಾಷ್ಟ್ರವಲ್ಲ ಎಂಬ ಕಾಂಗ್ರೆಸ್  ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರಿಪ್ರಸಾದ್ ಹೇಳಿಕೆ ಸಂಪೂರ್ಣ ನಾಚಿಕೆಗೇಡು ಎಂದು ಅವರು ಟೀಕಿಸಿದ್ದಾರೆ. ಕಾಂಗ್ರೆಸ್ ಎಂಎಲ್​ಸಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಪ್ರಸಾದ್ ಅವರ ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ನಿಜ ಬಣ್ಣ ಬದಲಾಗಿದೆ ಎಂದಿದ್ದಾರೆ.

ಶತ್ರು ರಾಷ್ಟ್ರ ಪಾಕಿಸ್ತಾನವು ಭಾರತದ ವಿರುದ್ಧ 4 ಯುದ್ಧಗಳನ್ನು ಮಾಡಿದೆ. ಕದನ ವಿರಾಮ ಉಲ್ಲಂಘನೆಯಲ್ಲಿ ಸದಾ ತೊಡಗಿಕೊಂಡಿದ್ದು, ನಮ್ಮ ಯೋಧರ ಮೇಲೆ ದಾಳಿ ನಡೆಸುತ್ತಿದೆ. ಕಾಶ್ಮೀರ ವಿಚಾರದಲ್ಲಿ ಪಟ್ಟುಬಿಡದೆ ಹಟ ಸಾಧಿಸುತ್ತಿದೆ. ಭಯೋತ್ಪಾದನೆಗೆ ನಿರಂತರವಾಗಿ ಕುಮ್ಮಕ್ಕು ನೀಡುತ್ತಿದೆ. ಇಷ್ಟಾಗಿಯೂ ಬಿಕೆ ಹರಿಪ್ರಸಾದ್ ಅವರು ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಪರಿಗಣಿಸುವುದಿಲ್ಲ. ಇದು ಸಂಪೂರ್ಣವಾಗಿ ನಾಚಿಕೆಗೇಡಿನ ಸಂಗತಿ ಎಂದು ಶೋಭಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೋಭಾ ಕರಂದ್ಲಾಜೆ ಎಕ್ಸ್ ಸಂದೇಶ

ಪಾಕಿಸ್ತಾನದ ಬೆದರಿಕೆ ಮತ್ತು ಆಕ್ರಮಣದಿಂದ ಭಾರತ ಮತ್ತು ಅದರ ಸಾರ್ವಭೌಮತ್ವವನ್ನು ರಕ್ಷಿಸಲು ಮಾಡಬೇಕಾಗಿ ಬಂದಿದ್ದ ತ್ಯಾಗ ಅಷ್ಟಿಷ್ಟಲ್ಲ. ಅದಕ್ಕಾಗಿ ತ್ಯಾಗ ಮಾಡಿದವರನ್ನು ಕೀಳಾಗಿ ಕಾಣುವುದು ಬೇಡ. ನಮ್ಮ ನೆಮ್ಮದಿಯ ನಿದ್ದೆಗೆ ಆ ಧೈರ್ಯಶಾಲಿ ಆತ್ಮಗಳ ತ್ಯಾಗ ಕಾರಣವಾಗಿದೆ. ಇದೀಗ ಮುಖವಾಡ ಕಳಚಿದೆ. ಕಾಂಗ್ರೆಸ್​ನ ನಿಜವಾದ ಬಣ್ಣ ಬಯಲಾಗಿದೆ ಎಂದು ಶೋಭಾ ಹೇಳಿದ್ದಾರೆ.

ಬಿಕೆ ಹರಿಪ್ರಸಾದ್ ಹೇಳಿದ್ದೇನು?
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ, ವಿಧಾನ ಪರಿಷತ್ ಕಪಾಲದಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನವು ಬಿಜೆಪಿಗೆ ಶತ್ರು ರಾಷ್ಟ್ರ ಆಗಿರಬಹುದು. ಆದರೆ, ಕಾಂಗ್ರೆಸ್‌ಗೆ ಅಲ್ಲ. ನಮಗೆ ಅದು ನೆರೆ ರಾಷ್ಟ್ರ ಅಷ್ಟೇ ಎಂದು ಹರಿಪ್ರಸಾದ್​ ಹೇಳಿದ್ದರು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

17 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

17 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

17 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

18 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

18 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

19 hours ago