ನವದೆಹಲಿ: ಹರಿಯಾಣ ಕಾಂಗ್ರೆಸ್‌ನ ಮಾಜಿ ನಾಯಕ ಕುಲದೀಪ್ ಬಿಷ್ಣೋಯಿ ಅವರು ತಮ್ಮ ಪತ್ನಿ ರೇಣುಕಾ ಬಿಷ್ಣೋಯಿ ಅವರೊಂದಿಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಸಮ್ಮುಖದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾದರು.
ಮಾಜಿ ಮುಖ್ಯಮಂತ್ರಿ ಭಜನ್ ಲಾಲ್ ಅವರ ಮಗನಾಗಿರುವ ಕುಲದೀಪ್ ಬಿಷ್ಣೋಯಿ, ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರ ಪತ್ನಿ ರೇಣುಕಾ ಕೂಡ ಮಾಜಿ ಶಾಸಕಿ.
ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿಷ್ಣೋಯಿ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಮುಖ್ಯಮಂತ್ರಿ ಖಟ್ಟರ್, ಬಿಷ್ಣೋಯಿ ಸೇರ್ಪಡೆಯು ಸಂಘಟನೆಗೆ ಬಲ ತುಂಬಲಿದೆ ಎಂದು ಹೇಳಿದ್ದಾರೆ.
ಬಿಷ್ಣೋಯಿ ಅವರು ಕಾಂಗ್ರೆಸ್ ಶಾಸಕರಾಗಿದ್ದರೂ, ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ ಎಂದೂ ಖಟ್ಟರ್ ಉಲ್ಲೇಖಿಸಿದ್ದಾರೆ.
ಇದೇ ವೇಳೆ, ಮೋದಿ ‘ಶ್ರೇಷ್ಠ ಪ್ರಧಾನಿ’ ಎಂದು ಶ್ಲಾಘಿಸಿದ ಬಿಷ್ಣೋಯಿ, ಸದಾ ದೇಶ ಮತ್ತು ಬಡವರ ಕಲ್ಯಾಣದ ಬಗ್ಗೆ ಚಿಂತಿಸುವ ಅವರನ್ನು (ಮೋದಿಯವರನ್ನು) ‘ಭಾರತದ ಅತ್ಯುತ್ತಮ ಪ್ರಧಾನಿ’ ಎಂದು ವರ್ಣಿಸಿದರೆ ತಪ್ಪಾಗುವುದಿಲ್ಲ ಎಂದು ಹೊಗಳಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…