ಹರಿಯಾಣ: ಹರಿಯಾಣದ ಕಾಂಗ್ರೆಸ್ ಶಾಸಕಿ ಕಿರಣ್ ಚೌಧರಿ ತಮ್ಮ ಮಗಳು ಶೃತಿ ಚೌಧರಿ ಜತೆಗೆ ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೆರ್ಪಡೆ ಕಾಂಗ್ರೆಸ್ ಪಕ್ಷಕ್ಕೆ ಅಘಾತವಾಗಿದೆ.
ಕಿರಣ್ ಮತ್ತು ಶ್ರುತಿ ಚೌಧರಿ ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ ಕಿರಣ್ ಬರೆದುಕೊಂಡಿದ್ದಾರೆ.
ಹರ್ಯಾಣದಲ್ಲಿ ಕಾಂಗ್ರೆಸ್ ವೈಯಕ್ತಿಕ ದಂಧೆ ನಡೆಸುತ್ತಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದರಲ್ಲಿ ನನ್ನಂತಹ ಪ್ರಾಮಾಣಿಕ ಧ್ವನಿಗಳಿಗೆ ಅವಕಾಶವಿಲ್ಲ. ನನ್ನಂತಹವರನ್ನು ಬಹಳ ಯೋಜನಾ ಬದ್ಧವಾಗಿ ಹತ್ತಿಕ್ಕಲಾಗುತ್ತದೆ. ಕಾಲಕಾಲಕ್ಕೆ ಅಪಮಾನಗಳನ್ನು ಮಾಡಿ ಷಡ್ಯಂತ್ರಗಳನ್ನು ಹೆಣೆಯುತ್ತಾರೆ. ನನ್ನ ಜನರನ್ನು ಪ್ರತಿನಿಧಿಸುವ ಮತ್ತು ಮೌಲ್ಯಗಳನ್ನು ಎತ್ತಿಹಿಡಿಯುವ ನನ್ನ ಪ್ರಯತ್ನಗಳಿಗೆ ಅಡ್ಡಿಯಾಗುತ್ತಿದೆ ಎಂದು ತಿಳಿಸಿದ್ದರೆ.
ಕಾಂಗ್ರೆಸ್ ಪಕ್ಷವು ದುರದೃಷ್ಟವಶಾತ್ ತನ್ನ ಸ್ವಾರ್ಥಕ್ಕಾಗಿ ಪಕ್ಷದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಂಡ ಒಬ್ಬ ವ್ಯಕ್ತಿಯ ಮೇಲೆ ಕೇಂದ್ರೀಕರಿಸಿದೆ ಎಂದು ಶೃತಿ ಚೌಧರಿ ರಾಜೀನಾಮೆಯಲ್ಲಿ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…