Categories: ಉಡುಪಿ

ಹರಿಯಾಣ : ಕಾಂಗ್ರೆಸ್​ ಶಾಸಕಿ ಕಿರಣ್​ ಚೌಧರಿ ಮಗಳು ಶೃತಿ ಚೌಧರಿ ಜತೆಗೆ ಬಿಜೆಪಿಗೆ ಸೇರ್ಪಡೆ – vishwanews24

ಹರಿಯಾಣ : ಕಾಂಗ್ರೆಸ್​ ಶಾಸಕಿ ಕಿರಣ್​ ಚೌಧರಿ ಮಗಳು ಶೃತಿ ಚೌಧರಿ ಜತೆಗೆ ಬಿಜೆಪಿಗೆ ಸೇರ್ಪಡೆ

ಹರಿಯಾಣ: ಹರಿಯಾಣದ ಕಾಂಗ್ರೆಸ್​ ಶಾಸಕಿ ಕಿರಣ್​ ಚೌಧರಿ ತಮ್ಮ ಮಗಳು ಶೃತಿ ಚೌಧರಿ ಜತೆಗೆ ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೆರ್ಪಡೆ ಕಾಂಗ್ರೆಸ್​ ಪಕ್ಷಕ್ಕೆ ಅಘಾತವಾಗಿದೆ.

ಕಿರಣ್ ಮತ್ತು ಶ್ರುತಿ ಚೌಧರಿ ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ ಕಿರಣ್ ಬರೆದುಕೊಂಡಿದ್ದಾರೆ.

ಹರ್ಯಾಣದಲ್ಲಿ ಕಾಂಗ್ರೆಸ್ ವೈಯಕ್ತಿಕ ದಂಧೆ ನಡೆಸುತ್ತಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದರಲ್ಲಿ ನನ್ನಂತಹ ಪ್ರಾಮಾಣಿಕ ಧ್ವನಿಗಳಿಗೆ ಅವಕಾಶವಿಲ್ಲ. ನನ್ನಂತಹವರನ್ನು ಬಹಳ ಯೋಜನಾ ಬದ್ಧವಾಗಿ ಹತ್ತಿಕ್ಕಲಾಗುತ್ತದೆ. ಕಾಲಕಾಲಕ್ಕೆ ಅಪಮಾನಗಳನ್ನು ಮಾಡಿ ಷಡ್ಯಂತ್ರಗಳನ್ನು ಹೆಣೆಯುತ್ತಾರೆ. ನನ್ನ ಜನರನ್ನು ಪ್ರತಿನಿಧಿಸುವ ಮತ್ತು ಮೌಲ್ಯಗಳನ್ನು ಎತ್ತಿಹಿಡಿಯುವ ನನ್ನ ಪ್ರಯತ್ನಗಳಿಗೆ ಅಡ್ಡಿಯಾಗುತ್ತಿದೆ ಎಂದು ತಿಳಿಸಿದ್ದರೆ.

ಕಾಂಗ್ರೆಸ್ ಪಕ್ಷವು ದುರದೃಷ್ಟವಶಾತ್ ತನ್ನ ಸ್ವಾರ್ಥಕ್ಕಾಗಿ ಪಕ್ಷದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಂಡ ಒಬ್ಬ ವ್ಯಕ್ತಿಯ ಮೇಲೆ ಕೇಂದ್ರೀಕರಿಸಿದೆ ಎಂದು ಶೃತಿ ಚೌಧರಿ ರಾಜೀನಾಮೆಯಲ್ಲಿ ಹೇಳಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

5 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

32 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago