ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಏತನ್ಮಧ್ಯೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದಕ್ಕೆ ಕಾರಣವಾಗುತ್ತಿರುವುದು ಈ ಬಾರಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರಕುವುದು ಅನುಮಾನ ಮೂಡಿಸಿದೆ. ಬಿಜೆಪಿ 40 ಸ್ಥಾನಗಳಲ್ಲಿ, ಕಾಂಗ್ರೆಸ್ 33 ಹಾಗೂ ಜೆಜೆಪಿ (ಜನನಾಯಕ್ ಜನತಾ ಪಕ್ಷ) 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಈ ಹಿನ್ನೆಲೆಯಲ್ಲಿ ಜೆಜೆಪಿ ಸ್ಥಾಪಕ ದುಶ್ಯಂತ್ ಚೌಟಾಲಾ ಇದೀಗ ಯಾರೇ ಸರಕಾರ ರಚನೆ ಮಾಡುವುದಿದ್ದರೂ ಅದರ ಕೀಲಿ ಕೈ ನಮ್ಮ ಬಳಿ ಇದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಷ್ಟೇ ಅಲ್ಲ ನಮಗೆ ಯಾರು ಮುಖ್ಯಮಂತ್ರಿ ಸ್ಥಾನ ಕೊಡುತ್ತಾರೋ ಅವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಚೌಟಾಲಾ ಆಫರ್ ನೀಡಿದ್ದಾರೆ.
ಮತ್ತೊಂದೆಡೆ ಜೆಜೆಪಿ ಮುಖ್ಯಸ್ಥ ದುಶ್ಯಂತ್ ಚೌಟಾಲಾ ಜತೆ ಕಾಂಗ್ರೆಸ್ ಪಕ್ಷ ನಿರಂತರ ಸಂಪರ್ಕದಲ್ಲಿದ್ದು, ಡಿಸಿಎಂ ಹುದ್ದೆ ಕೊಡುವುದಾಗಿ ತಿಳಿಸಿದ್ದು, ಮಾತುಕತೆ ಮುಂದುವರಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಹರಿಯಾಣದಲ್ಲಿ ಸರಕಾರ ರಚನೆ ಮಾಡಲು 45 ಸ್ಥಾನಗಳ ಅಗತ್ಯವಿದೆ. ಬಿಜೆಪಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 34 ಸ್ಥಾನಗಳಲ್ಲಿ, ಜೆಜೆಪಿ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನ ಹೊಸ್ತಿಲಿನಲ್ಲಿದೆ
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…