Featured

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್ ಪಡುಮಲೆಯವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮಾ.28ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಎಲ್ಲ ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿವಿಯ ಸಹಕುಲಾಧಿಪತಿಯೂ ಆಗಿರುವ ಡಾ.ಎಂ.ಸಿ. ಸುಧಾಕರ್ ಉಪಸ್ಥಿತರಿರುವರು. ಸಂಸದ ಕ್ಯಾ.ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಈ ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 162 (ಕಲಾ ನಿಕಾಯ-40, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ-92. ವಾಣಿಜ್ಯ ನಿಕಾಯ – 25, ಶಿಕ್ಷಣ ನಿಕಾಯ – 05) ಸಂಶೋಧನಾ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ (ಪಿ.ಎಚ್.ಡಿ.) ಪಡೆಯಲಿದ್ದಾರೆ. ಇವರಲ್ಲಿ 74 (45.67%) ಮಹಿಳೆಯರು ಮತ್ತು 88 (54.32%) ಪುರುಷರು ಹಾಗೂ 11 (ಪುರುಷ-10, ಮಹಿಳೆ-01) ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಡಾಕ್ಟರೇಟ್ ಪದವಿ ಪಡೆಯಲಿರುವರು.

56 ಚಿನ್ನದ ಪದಕ ಮತ್ತು 57 ನಗದು ಬಹುಮಾನಗಳಿದ್ದು, ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳ ಒಟ್ಟು 147 ರ‍್ಯಾಂಕ್ ಗಳಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುವ 69 (ಸ್ನಾತಕೋತ್ತರ ಪದವಿ- 50 ಮತ್ತು ಪದವಿ-19) ವಿದ್ಯಾರ್ಥಿಗಳಿಗೆ ರ‍್ಯಾಂಕ್ ಪ್ರಮಾಣ ಪತ್ರವನ್ನು ನೀಡಲಾಗುವುದು.

ಇದನ್ನೂ ಓದಿ:

ಇದರಲ್ಲಿ ಕಲಾ ನಿಕಾಯದ-17, ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ-40, ವಾಣಿಜ್ಯ ನಿಕಾಯದ -08, ಶಿಕ್ಷಣ ನಿಕಾಯದ -04 ವಿದ್ಯಾರ್ಥಿಗಳಿದ್ದಾರೆ ಎಂದು ಪ್ರೊ.ಧರ್ಮ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ.ದೇವೇಂದ್ರಪ್ಪ (ಪರೀಕ್ಷಾಂಗ )ಗಣೇಶ್ ಸಂಜೀವ (ಪ್ರಭಾರ),ಹಣಕಾಸು ಅಧಿಕಾರಿ ಪಂಚಲಿಂಗಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

2 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

2 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

3 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

3 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

3 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

3 hours ago