Featured

ಹರ್ಯಾಣ : ಬಿಜೆಪಿಗೆ ಪಕ್ಷೇತರರ ಬೆಂಬಲ ,ಸರ್ಕಾರದ ರಚನೆಗೆ ಮುಂದಾದ ಕಮಲ ಪಡೆ -Vishwanews24

ನವದೆಹಲಿ: ಚುನಾವಣಾ ಫಲಿತಾಂಶದ ನಂತರ ಹರ್ಯಾಣ ರಾಜಕೀಯ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಎಲ್ಲ ಪಕ್ಷೇತರ 7 ಹಾಗೂ ಹರ್ಯಾಣ ಲೋಕಹಿತ ಪಕ್ಷದ ಒಬ್ಬ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಹರ್ಯಾಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ತಂತ್ರ ಹೆಣೆಯುತ್ತಿವೆ. ಒಂದೆಡೆ ಕಾಂಗ್ರೆಸ್ ಜನನಾಯಕ್ ಜನತಾ ಪಕ್ಷ(ಜೆಜೆಪಿ)ದ ನಾಯಕ ದುಶ್ಯಂತ್ ಚೌಟಾಲಾ ಅವರನ್ನು ಸೆಳೆಯಲು ಯತ್ನಿಸುತ್ತಿದೆ. ಬಿಜೆಪಿಯು ಸಹ ಗುರುವಾರ ಚೌಟಾಲಾ ಅವರನ್ನು ಸಂಪರ್ಕಿಸಲು ಯತ್ನಿಸಿತ್ತು. ಆದರೆ ಚೌಟಾಲಾ ಅವರು ಮುಖ್ಯಮಂತ್ರಿ ಹುದ್ದೆ ನೀಡುವವರಿಗೆ ತಮ್ಮ ಬೆಂಬಲ ಎಂದು ಪಟ್ಟು ಹಿಡಿದ್ದಾರೆ.

ನಿನ್ನೆ ಚೌಟಾಲಾ ಅವರನ್ನು ಎರಡೂ ರಾಜಕೀಯ ಪಕ್ಷಗಳ ನಾಯಕರು ಸಂಪರ್ಕಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಚೌಟಾಲಾ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ ಇಂದು ತಮ್ಮ ನಿರ್ಧಾರ ತಿಳಿಸುವುದಾಗಿ ಗುರುವಾರ ಹೇಳೀದ್ದರು. ಇದೀಗ ಭಾರೀ ಬೆಳವಣಿಗೆ ನಡೆದಿದ್ದು, 8 ಪಕ್ಷೇತರ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿ ಹರ್ಯಾಣದಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಹರ್ಯಾಣ ರಾಜಕೀಯ ದಂಗಲ್‍ಗೆ ತೆರೆ ಬಿದ್ದಿದೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

11 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

16 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

16 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

16 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago