Featured

ಹರ್ಯಾಣ ವಿಧಾನಸಭಾ ಚುನಾವಣೆ : ಭಾರತದ ಒಲಿಂಪಿಕ್‌ ಕುಸ್ತಿ ಪಟುಗಳಾದ ಯೋಗೇಶ್ವರ್ ದತ್, ಬಬಿತಾ ಫೋಗಟ್ ರನ್ನು ಕಣಕ್ಕಿಳಿಸಿದ ಬಿಜೆಪಿ -Vishwanews24

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ 78 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಸಿಎಂ ಮನೋಹರ್ ಖಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಸುಭಾಷ್ ಬರಾಲಾ, ಕ್ರೀಡಾ ಕ್ಷೇತ್ರದ ಹಲವು ಸಾಧಕರಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ನೀಡಿಲಾಗಿದ್ದು, ಕುಸ್ತಿ ಪಟುಗಳಾದ ಯೋಗೇಶ್ವರ್ ದತ್, ಬಬಿತಾ ಪೋಗಟ್ ಹಾಗೂ ಭಾರತದ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್​ಗೆ ಬಿಜೆಪಿ ಟಿಕೆಟ್ ನೀಡಿದೆ.

78 ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಯಲ್ಲಿ ಸೋಮವಾರ ಪ್ರಕಟಿಸಲಾಯಿತು. ಒಲಿಂಪಿಕ್‌ ಕುಸ್ತಿ ಪಟುಗಳಾದ ಯೋಗೇಶ್ವರ ದತ್‌ ಹಾಗೂ ಬಬಿತಾ ಪೋಗಟ್‌, ಇತ್ತೀಚೆಗೆ ಬಿಜೆಪಿ ಸೇರಿದ್ದ ಭಾರತೀಯ ಹಾಕಿ ತಂಡದ ನಾಯಕ ಸಂದೀಪ್‌ ಸಿಂಗ್‌ ಅವರು ಈ ಬಾರಿ ಬಿಜೆಪಿಯಿಂದ ಕಣಕ್ಕೆ ಇಳಿಯಲಿದ್ದಾರೆ.

ಮೊದಲ ಪಟ್ಟಿಯಲ್ಲಿ 38 ಹಾಲಿ ಶಾಸಕರಿಗೆ ಚುನಾವಣೆಗೆ ಟಿಕೆಟ್ ನೀಡಲಾಗಿದ್ದು, 8 ಮಹಿಳೆಯರಿಗೂ ಟಿಕೆಟ್ ಕಲ್ಪಿಸಲಾಗಿದೆ. ಇಬ್ಬರು ಸಚಿವರು, 7 ಶಾಸಕರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಕುರಿತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಸೇರಿ ಪಕ್ಷದ ಪ್ರಮುಖರು ಭಾನುವಾರ ತಡರಾತ್ರಿಯವರೆಗೂ ಸಭೆ ನಡೆಸಿದ್ದರು. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ 2014ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 47ರಲ್ಲಿ ಜಯಗಳಿಸಿತ್ತು. ಕಾಂಗ್ರೆಸ್ 15, ಐಎನ್​ಎಲ್​ಡಿ 19 ಹಾಗೂ ಸ್ಥಳೀಯ ಪಕ್ಷಗಳು ಮತ್ತು ಪಕ್ಷೇತರರು 9 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago