ಬೆಂಗಳೂರು: ಹರ್ಷನ ಒಂದೊಂದು ರಕ್ತದ ಹನಿಯೂ ವ್ಯರ್ಥವಾಗದಂತೆ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಶಪಥ ಮಾಡ್ತೇವೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರ್ಷನನ್ನ ಆದರ್ಶವಾಗಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹಿಂದೂ ಕಾರ್ಯಕರ್ತರು ಹೋರಾಟ ಮಾಡುತ್ತೇವೆ. ಹಿಜಬ್ ಗಲಾಟೆಗೂ ಹರ್ಷನ ಕೊಲೆಗೂ ಸಂಬಂಧ ಇದೆ. ಎಸ್‍ಡಿಪಿಐ, ಪಿಎಫ್‍ಐ ಇಸ್ಲಾಂನ ದುಷ್ಟ ಶಕ್ತಿಗಳು ಈ ಕೊಲೆ ಹಿನ್ನೆಲೆಯ ಕಾರಣಕರ್ತರಾಗಿದ್ದಾರೆ. ಅವನೊಬ್ಬ ಹಿಂದೂ ಕಾರ್ಯಕರ್ತ ಎನ್ನುವುದಕ್ಕೆ ಈ ಕೊಲೆಯಾಗಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ :
ಹರ್ಷ ದೇಶಭಕ್ತ, ಹಿಂದೂವಾದಿ ಅನ್ನೊದಕ್ಕೆ ಅವನ ಕೊಲೆಯಾಗಿದೆ. ಬಿಜೆಪಿ ಸರ್ಕಾರ ಹಿಂದೂ ಕಾರ್ಯಕರ್ತರ ಬಗ್ಗೆ ಅತ್ಯಂತ ನಿರ್ಲಕ್ಷ್ಯ ವಹಿಸಿದ್ದಾರೆ. ಇವರಿಗೆ ಅಧಿಕಾರ ಬೇಕು, ಹಿಂದುತ್ವ ಮಾತನಾಡಬೇಕು ಅಷ್ಟೇ. ಕಾರ್ಯಕರ್ತರ ಸುರಕ್ಷತೆ ಕಷ್ಟ ಸುಖಗಳ ಬಗ್ಗೆ ಬಿಜೆಪಿಗೆ ಎಳ್ಳಷ್ಟು ಯೋಚನೆ ಇಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಹರ್ಷ ಮನೆಗಾಗಿ ಹೋರಾಟ ಮಾಡಿದ ವ್ಯಕ್ತಿಯಲ್ಲ. ದೇಶಕ್ಕಾಗಿ ಹೋರಾಟ ಮಾಡಿದ ವ್ಯಕ್ತಿ. ಹರ್ಷನ ಸಾವು ಮನೆಯವರಿಗೆ ಮಾತ್ರ ದುಃಖ ಅಲ್ಲ ಇಡೀ ಹಿಂದೂ ಸಮಾಜಕ್ಕೆ ನೋವುಂಟು ಮಾಡಿದೆ. ಅಮಾಯಕ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ ಎಂದರೆ ಯಾರಿಗೆ ಸಿಟ್ಟು ಬರಲ್ಲ. ಆ ಸಿಟ್ಟು ನಮ್ಮ ಪ್ರತಿಭಟನೆಗಳಲ್ಲಿ, ರೋಷಾವೇಶಗಳಲ್ಲಿ ವ್ಯಕ್ತವಾಗುತ್ತಿದೆ. ಕೊಲೆ ಮಾಡಿದವರನ್ನು ಕೇವಲ ಬಂಧನ ಮಾಡಿದರೆ ಸಾಕಾಗಲ್ಲ. ನ್ಯಾಯಲಯಗಳಲ್ಲಿ ಇತ್ಯರ್ಥ ತಕ್ಷಣ ಆಗಬೇಕು. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ :
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…