ಬೆಂಗಳೂರು : ‘ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ ? ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ರೂ. ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಯಾವ ನಿಯಮಗಳ ಅಡಿಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ನೀಡಲಾಗಿದೆ? ರಾಜ್ಯದಲ್ಲಿ ವೈಯಕ್ತಿಕ ದ್ವೇಷಗಳಿಗೆ ಮೃತಪಟ್ಟವರಿಗೆ ಇದೇ ರೀತಿ ಪರಿಹಾರ ನೀಡುತ್ತದೆಯೇ ಈ ಸರ್ಕಾರ? ಮೃತ ಹರ್ಷನ ಮೇಲೆ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂಬ ವಿಷಯ ತಿಳಿದುಬಂದಿದೆ. 2020ರಲ್ಲಿ ಇವರದ್ದೇ ಸರ್ಕಾರ ಆತನನ್ನು ಜೈಲಿಗಟ್ಟಿತ್ತು,ಶಿವಮೊಗ್ಗದ ಉಸ್ತುವಾರಿ ಸಚಿವ ನಾರಾಯನಗೌಡರೇ ವೈಯುಕ್ತಿಕ ಕಾರಣಗಳಿಗೆ ನಡೆದ ಕೊಲೆ ಎಂದಿದ್ದಾರೆ. ಪೊಲೀಸರ ತನಿಖಾ ವರದಿಯೂ ಬಂದಿಲ್ಲ.ಹೀಗಿರುವಾಗ ಈ ಪರಿಹಾರ ಹಣ ಕೊಟ್ಟಿದ್ದು ಏಕೆ? ಹೇಗೆ? ಎಂದು ವಾಗ್ದಾಳಿ ನಡೆಸಿದ್ದಾರೆ.
ನೆರೆ ಸಂತ್ರಸ್ತರಿಗೆ, ಕೋವಿಡ್ ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಸತಾಯಿಸುವ ಈ ಸರ್ಕಾರ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಹಣ ನೀಡಿರುವುದು ಆಶ್ಚರ್ಯಕರ!ಇಂತಹ ಉದಾರ ಮನಸಿದ್ದರೆ ಧರ್ಮಸ್ಥಳದಲ್ಲಿ ಬಿಜೆಪಿ ಮುಖಂಡನಿಂದ ಹತ್ಯೆಯಾದ ದಲಿತ ಯುವಕ ದಿನೇಶ್ ಕುಟುಂಬಕ್ಕೆ ಏಕಿಲ್ಲ? ಕೊಡಗಿನ ಯೋಧನ ಕುಟುಂಬಕ್ಕೆ ಏಕಿಲ್ಲ?ಅನಾರೋಗ್ಯ ಪೀಡಿತರಿಗೆ, ಬಡವರ ನೆರವಿಗೆ, ಯೋಧರ ಕುಟುಂಬಗಳಿಗೆ ಬಳಸಬಹುದಾದ ‘ವಿವೇಚನೆ’ಯನ್ನು ತಮ್ಮ ಪಕ್ಷದ ಕೆಡರ್ ಒಬ್ಬನಿಗೆ ಬಳಸಿದ್ದು ಮುಖ್ಯಮಂತ್ರಿಗಳ ಯೋಚನೆ, ವಿವೇಚನೆ ಎಂತದ್ದು ಎಂದು ತಿಳಿಸುತ್ತದೆ. ಬಿಜೆಪಿ ಪಕ್ಷದ ಮೂಲಕ 25 ಲಕ್ಷವಲ್ಲ 25 ಕೋಟಿಯಾದರೂ ಕೊಡಲಿ, ಆದರೆ ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು? ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ? ಸಿಎಂ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…