ಬೆಂಗಳೂರು: ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಎರಡನೇ ಕಂತು ವಿಳಂಬವಾಗುತ್ತಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
”ಈ ತಿಂಗಳದ್ದು ಸುಮಾರು ಒಂದು ಕೋಟಿ ಹತ್ತು ಲಕ್ಷ ಜನರಿಗೆ ಸರಕಾರದಿಂದ ಹಣ ಬಿಡುಗಡೆ ಆಗಿದೆ. ಕೆವೈಸಿ ತೊಂದರೆ, ತಾಂತ್ರಿಕ ತೊಂದರೆ ಆಗಿದ್ದರಿಂದ ಹಣ ವರ್ಗಾವಣೆಗೆ ತೊಂದರೆ ಆಗಿದೆ. ಆದರೆ ಎಲ್ಲರಿಗೂ ಹಣ ಸಿಗಲಿದೆ, ಯಾರೂ ತಲೆ ಕೆಡಸಿಕೊಳ್ಳಬೇಡಿ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
”ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಇಲಾಖೆಯಿಂದ ಆಗುತ್ತಿದೆ. ಬೆಂಗಳೂರಿನ ಬಾಲ ಭವನದಲ್ಲಿ ಪ್ರತಿಯೊಂದು ಜಿಲ್ಲೆಯ ಸಿಡಿಪಿಒ ಮತ್ತು ಎಲ್ಲ ಬ್ಯಾಂಕ್ ಗಳ ಸಂಬಂಧಪಟ್ಟವರನ್ನು ಕರೆದು ಸಭೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.
”ಸರಕಾರದಿಂದ ಖಾತೆಗೆ ಹಣ ಬರಲು ಈ ಹಿಂದೆ 25ದಿನ ಬೇಕಾಗುತ್ತಿತ್ತು. ಈಗ ಅದನ್ನ ಬಹಳ ಸರಳೀಕರಣ ಮಾಡಿದ್ದೇವೆ. ಸರಕಾರ ಟ್ರೆಶರಿಗೆ ಕಳುಹಿಸಿ ಅಲ್ಲಿಂದ ನಮ್ಮ ಇಲಾಖೆಯ ಪ್ರಧಾನ ಕಚೇರಿಯಿಂದ ಎಲ್ಲರಿಗೂ ಹಣ ಹೋಗುವಂತೆ ಮಾಡಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.
”ತಡವಾದರೂ ಒಮ್ಮೆಯೇ ಎರಡು ಕಂತಿನ ನಾಲ್ಕು ಸಾವಿರ ಹಣ ಜಮಾ ಆಗುತ್ತದೆ. ಅಗಸ್ಟ್ 30ರ ನಂತರ ನೋಂದಣಿ ಮಾಡಿಸಿದವರಿಗೆ ಒಂದು ಕಂತಿನ ಹಣ ಬಂದಿದೆ” ಎಂದು ಸಚಿವರು ಮಾಹಿತಿ ನೀಡಿದ್ದಾರೆ.
”ಆಗಸ್ಟ್ ತಿಂಗಳಿನಲ್ಲಿ ಶೇ.88ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇ.100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ” ಎಂದು ಅವರು ಹೇಳಿದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…