ಹಲವಾರು ವರ್ಷಗಳ ಹಿಂದಿನ ಪದ್ಧತಿಯನ್ನು ಮುರಿದು ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧಿಸಿರುವುದು ಸರಿಯಲ್ಲ : ಯು.ಟಿ. ಖಾದರ್ – Vishwanews24

Featured, ಉಡುಪಿ

ಮಂಗಳೂರು : ಹಲವಾರು ವರ್ಷಗಳ ಹಿಂದಿನ ಪದ್ಧತಿಯನ್ನು ಮುರಿದು ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧಿಸಿರುವುದು ಸರಿಯಲ್ಲ : ಯು.ಟಿ. ಖಾದರ್ – Vishwanews24

ಮಂಗಳೂರು : ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳನ್ನು ಕಾಲೇಜು ಆವರಣ ಪ್ರವೇಶ ನಿರಾಕರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ಖಂಡಿಸಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಶಿರವಸ್ತ್ರ ಧರಿಸಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ಏಕಾಏಕಿ ತಡೆದಿರುವುದಕ್ಕೆ ಯು.ಟಿ.ಖಾದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಾಹ್ಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಕಳೆದ ಹಲವಾರು ವರ್ಷಗಳ ಹಿಂದಿನ ಪದ್ಧತಿಯನ್ನು ಮುರಿದು ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧಿಸಿರುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನು ಸೂಕ್ಷ್ಮ ವಿಚಾರಗಳನ್ನು ಸರಕಾರ ಸಮರ್ಪಕವಾಗಿ ನಿಭಾಯಿಸಬೇಕು. ವಿದ್ಯಾರ್ಥಿಗಳಾ ಭವಿಷ್ಯದ ಹಿತದೃಷ್ಠಿಯಿಂದ ಈ ಹಿಂದೆ ಇದ್ದ ಪದ್ಧತಿಯನ್ನೇ ಮುಂದುವರೆಸಲು ಅವಕಾಶವನ್ನು ಮಾಡಿಕೊಡಬೇಕು. ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಗಳು ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಉಡುಪಿ : ಕೇವಲ ಆರು ವಿದ್ಯಾರ್ಥಿನಿಯರಿಂದ 600 ಮಕ್ಕಳ ಭವಿಷ್ಯ ಹಾಳಾಗುತ್ತಿದೆ : ಜಿಲ್ಲಾಧಿಕಾರಿಗೆ ಇತರ ವಿದ್ಯಾರ್ಥಿನಿಯರ ಮನವಿ  – Vishwanews24

Leave a Reply