Featured

ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ – ಡಿ.17ರಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಬಂದ್‌ಗೆ ಕರೆ – Vishwanews24

ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ – ಡಿ.17ರಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಬಂದ್‌ಗೆ ಕರೆ

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಡಿಸೆಂಬರ್‌ 17ರಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಬಂದ್‌ಗೆ ಕರೆ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್‌ ಮಹತ್ವದ ಮಾಹಿತಿ ನೀಡಿದ್ದಾರೆ.

ಡಿ. 17ರಂದು ರಾಜ್ಯಾದ್ಯಂತ ವಿವಿ ಹಾಗೂ ಸಂಯೋಜಿತ ಕಾಲೇಜುಗಳ ಬಂದ್‌ಗೆ ಕರೆ ನೀಡಿದ್ದು ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ ವಿದ್ಯಾರ್ಥಿ ವೇತನ, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ, ಉಚಿತ ಬಸ್ ಪಾಸ್ ಸೇರಿದಂತೆ ಹಲವು ಸಮಸ್ಯೆಗಳನ್ನು ರಾಜ್ಯದ ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ.

ಇದರಿಂದಾಗಿ ವಿದ್ಯಾರ್ಥಿಗಳು, ವಿಶೇಷವಾಗಿ ವಿದ್ಯಾರ್ಥಿನಿಯರು ಶಿಕ್ಷಣದಿಂದ ದೂರ ಉಳಿಯುವಂತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್‌ ಹೇಳಿದ್ದಾರೆ.

ಎನ್‌ಎಸ್‌ಯುಐ ಪ್ರಕಾರ ಪ್ರಸ್ತುತ ದಿನಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳೇನು..?

1. ಹಲವು ಪರೀಕ್ಷೆಯ ಫಲಿತಾಂಶಗಳು ವಿಳಂಬವಾಗಿ ನೀಡುತ್ತಿದ್ದಾರೆ.

2. ವಿದ್ಯಾರ್ಥಿಗಳಿಗೆ ಸಿಗಬೇಕಾದ ವಿದ್ಯಾರ್ಥಿ ವೇತನದ ಸಮಸ್ಯೆಗಳು ಹೆಚ್ಚಾಗುತ್ತಿದೆ.

3. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸರ್ಕಾರಿ ಸಾರಿಗೆ ಸೌಲಭ್ಯಗಳನ್ನು ಅವಲಂಭಿಸಿದ್ದು, ವಿದ್ಯಾರ್ಥಿಗಳಿಗೆ ಬಸ್‌ ಸಾರಿಗೆ ಸಮಸ್ಯೆ ಹೆಚ್ಚಾಗಿದೆ.

4. ಸರ್ಕಾರಿ ಕಾಲೇಜುಗಳ ಶುಲ್ಕ ಹೆಚ್ಚಳ ಮಾಡುತ್ತಿರುವುದು ಕೂಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಇನ್ನು ಕಾಲೇಜುಗಳು ಸರಿಯಾದ ಸಮಯಕ್ಕೆ ಫಲಿತಾಂಶಗಳನ್ನು ನೀಡಬೇಕು. ರಾಜ್ಯ ಸರ್ಕಾರ ತಕ್ಷಣ ವಿದ್ಯಾರ್ಥಿ ವೇತನಗಳನ್ನು ಬಿಡುಗಡೆ ಮಾಡಬೇಕು. ರಾಜ್ಯಾದ್ಯಂತ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್‌ ನೀಡಬೇಕು.

ಅಲ್ಲದೇ ಸರ್ಕಾರಿ ಕಾಲೇಜುಗಳ ಶುಲ್ಕಗಳನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಡಿಸೆಂಬರ್‌ 17ರಂದು ರಾಜ್ಯಾದ್ಯಂತ ಕಾಲೇಜುಗಳ ಬಂದ್‌ಗೆ ಕರೆ ನೀಡಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago