Featured

ಹಲಾಲ್ ಸ್ವೀಕರಿಸುವುದು, ಬಿಡುವುದು ಜನರ ಇಚ್ಛೆಗೆ ಬಿಟ್ಟದ್ದು , ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ: ಬಿ.ಸಿ ನಾಗೇಶ್

ಹಲಾಲ್ ಎನ್ನುವುದು ಮುಸ್ಲಿಂರ ಧಾರ್ಮಿಕ ವಿಚಾರ..

ಹಲಾಲ್ ನಿಷೇಧದ ಬಗ್ಗೆ ಸರ್ಕಾರದ ಮುಂದೆ ಯಾವುದೇ ವಿಚಾರವಿಲ್ಲ. ಇದು ಸರ್ಕಾರದ ವ್ಯಾಪ್ತಿಗೂ ಬರುವುದಿಲ್ಲ.

ಯಾರಿಗೆ ಇಷ್ಟ ಇದೆ ಅವರು ಹಲಾಲ್ ಸ್ವೀಕರಿಸುತ್ತಾರೆ. ಯಾರಿಗೆ ಇಷ್ಟ ಇಲ್ಲ ಅವರು ಸ್ವೀಕರಿಸಲ್ಲ.

ಈ ವಿಷಯವನ್ನು ಜನರು ಎತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಬೇಕಾದ ವಿಷಯವನ್ನು ಎತ್ತುವ ಅಧಿಕಾರವಿದೆ..

ಈ ವಿಚಾರದಲ್ಲಿ ಅನಗತ್ಯ ಗೊಂದಲಗಳು ಬೇಡ..

ಮಡಿಕೇರಿ : ರಾಜ್ಯದಲ್ಲಿ ಆರಂಭವಾಗಿರುವ ಹಲಾಲ್ ವಿವಾದ ವಿಚಾರವಾಗಿ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಹಲಾಲ್ ಸ್ವೀಕರಿಸುವುದು, ಬಿಡುವುದು ಜನರ ಇಚ್ಛೆಗೆ ಬಿಟ್ಟದ್ದು ಎಂದು ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಹಲಾಲ್ ಎನ್ನುವುದು ಮುಸ್ಲಿಂರ ಧಾರ್ಮಿಕ ವಿಚಾರ.

ಹಲಾಲ್‍ನ್ನು ಇಷ್ಟವಿದ್ದವರು ಅಂಗಡಿಗಳಲ್ಲಿ ಸ್ವೀಕರಿಸುತ್ತಾರೆ. ಇಷ್ಟವಿಲ್ಲದವರು ಬೇರೆ ಅಂಗಡಿಗಳಲ್ಲಿ ಕೊಳ್ಳುತ್ತಾರೆ. ಇದನ್ನು ಜನರೇ ಮಾಡಿಕೊಂಡಿದ್ದಾರೆ ವಿನಃ ನಾವು ಮಾಡಿದ್ದಲ್ಲ. ಈ ವಿಷಯವನ್ನು ಜನರು ಎತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಬೇಕಾದ ವಿಷಯವನ್ನು ಎತ್ತುವ ಅಧಿಕಾರವಿದೆ. ಈ ವಿಷಯವನ್ನು ಸರ್ಕಾರವಾಗಲೀ, ಯಾವುದೇ ರಾಜಕೀಯ ಪಕ್ಷವಾಗಲೀ ಎತ್ತಿಲ್ಲ ಎಂದರು.

ಹಲಾಲ್ ಬಗ್ಗೆ ಮಾಧ್ಯಮಗಳಲ್ಲಿನ ಚರ್ಚೆಯಿಂದಾಗಿಯೇ ಇಂದು ಜನರಿಗೆ ಗೊತ್ತಾಗಿದೆ. ಹಲಾಲ್ ನಿಷೇಧದ ಬಗ್ಗೆ ಸರ್ಕಾರದ ಮುಂದೆ ಯಾವುದೇ ವಿಚಾರವಿಲ್ಲ. ಇದು ಸರ್ಕಾರದ ವ್ಯಾಪ್ತಿಗೂ ಬರುವುದಿಲ್ಲ.

ಸರ್ಕಾರದ ವ್ಯಾಪ್ತಿಗೆ ಬಾರದ ವಿಷಯದ ಬಗ್ಗೆ ಅನಗತ್ಯವಾಗಿ ಸರ್ಕಾರ ಮೂಗು ತೂರಿಸಲ್ಲ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago