ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.
ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ ಧ್ರುವ ಮ್ಯಾನೇಜರ್ ಅಶ್ವಿನ್ ಸಾಥ್ ಕೊಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಶಾಂತ್ ಪೂಜಾರಿ ಅವರು ನಟ ಧ್ರುವ ಸರ್ಜಾಗೆ ಜಿಮ್ನಲ್ಲಿ ತರಬೇತಿ ನೀಡುತ್ತಿದ್ದು, ಇವರಿಬ್ಬರು ಆಪ್ತರಾಗಿದ್ದರು. ಆದರೆ ಇವರಿಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಸಾದ್ಯವಾಗದೇ ಹಲ್ಲೆಗೆ ಪ್ಲ್ಯಾನ್ ರೂಪಿಸಿದ್ದರು ಎನ್ನಲಾಗಿದೆ.
ನಾಗೇಂದ್ರ ಹಾಗೂ ಅಶ್ವಿನ್ ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದರಂತೆ. ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಅವರನ್ನು ಮುಂದಕ್ಕೆ ಬಿಟ್ಟು ಅಶ್ವಿನ್ ಹಲ್ಲೆ ಮಾಡಿಸಿದ್ದರು. ತನಿಖೆ ವೇಳೆ ಅಶ್ವಿನ್ ಪಾತ್ರ ಇರುವುದು ಬೆಳಕಿಗೆ ಬಂದಿದ್ದು, ಅಶ್ವಿನ್ ನನ್ನು ಬಂಧಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…