Featured

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ

ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ ಕ್ರಾಸ್ ವರೆಗೆ ರಸ್ತೆಯ  ಒಂದು ಬದಿ ಪೂರ್ಣ ಹಾಳಾಗಿದ್ದು  ವಾಹನ ಸವಾರರು ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಮಾರ್ಗದರ್ಶನದಲ್ಲಿ ಕರವೇ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಅವರು ಉತ್ತರಕನ್ನಡ ಜಿಲ್ಲೆ ಜಿಲ್ಲಾಧಿಕಾರಿಗೆ ವ್ಯಾಟ್ಸಪ್ ಹಾಗೂ ಇ ಮೇಲ್ ಮೂಲಕ ಸೋಮವಾರ ಮನವಿ ಸಲ್ಲಿಸಿದರು.

ಕೆಲವು  ವರ್ಷದ ಹಿಂದೆಯಷ್ಟೇ  ಕೋಟ್ಯಾಂತರ ಹಣ ಹಾಕಿ ನಿರ್ಮಿಸಿದ ರಸ್ತೆ ಸಂಪೂರ್ಣ  ಹಳ್ಳ ಹಿಡಿದಿದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳದಿರುವುದು ಈ ಸ್ಥಿತಿಗೆ  ಕಾರಣ ಎಂಬ  ಆರೋಪ ಕೇಳಿಬಂದಿದೆ. ಮುಖ್ಯ ರಸ್ತೆಯ   ಅರ್ಧ ಪಥ ಮಾತ್ರ ಡಾಂಬರೀಕರಣ ಕಾಮಗಾರಿ ಅಂದು ಮಾಡಲಾಗಿತ್ತು. ರಸ್ತೆ  ಅರ್ಧ ಪಥ  ಕಾಮಗಾರಿ ನಡೆಸದೇ  ತೀವ್ರ  ನಿರ್ಲಕ್ಷ್ಯ  ಮಾಡಲಾಗಿತ್ತು. ಈಗ ಈ ರಸ್ತೆಯ ಅರ್ಧ ಭಾಗ ಸಂಪೂರ್ಣ ವಾಹನ ಸಂಚಾರ  ಅಯೋಗ್ಯವಾಗಿದೆ.   ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸದಿರುವುದು ದುರ್ದೈವದ  ಸಂಗತಿ. ಕಾರವಾರ  ಇಳಕಲ್ ಕೈಗಾ  ಸಂಪರ್ಕ ಕಲ್ಪಿಸುವ ರಾಜ್ಯ ರಸ್ತೆಯಲ್ಲಿನ ಹಳೆಕೋಟದಿಂದ  ಕಡವಾಡ ಕ್ರಾಸ್ ವರೆಗೆ ರಸ್ತೆಯ ಒಂದು ಬದಿ  ಸಂಪೂರ್ಣ ಹಾಳಾಗಿದ್ದು ಈ ರಸ್ತೆಯಲ್ಲಿ  ಸಂಚಾರ  ಮಾಡುವುದು ತೀವ್ರ ಕಷ್ಟಕರವಾಗಿದೆ.

ವಾಹನ ಸವಾರರು ರಾತ್ರಿ ವೇಳೆಯಲ್ಲಿ ಬೀಳುವುದಲ್ಲದೇ ಹಗಲಿನಲ್ಲಿ  ರಸ್ತೆ ಹೊಂಡಗಳು ತಪ್ಪಿಸಲು ಹೋಗಿ ಎದುರಿನ ವಾಹನಕ್ಕೆ ಬಡಿದು ಸ್ಕೀಡ್ ಆಗಿ ಬಿದ್ದು ಅಪಘಾತ ಸಂಭವಿಸುತ್ತಿವೆ.  ದಿನೇ ದಿನೇ ಈ ಕಾರವಾರ  ಇಳಕಲ್ ರಸ್ತೆಯ  ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೂ   ಮೃತ್ಯು ಕೂಪವಾಗಿ ಪರಿಣಮಿಸಿದೆ. ಏಕೆಂದರೆ ಈ ರಸ್ತೆಯ  ಹದಗೆಟ್ಟ ಭಾಗದಿಂದ  ಸಂಚಾರ ಮಾಡದೇ  ವಿರುದ್ದ ಬದಿಯ ಪಥದತ್ತ ವೇಗವಾಗಿ  ಸಂಚರಿಸುತ್ತಾರೆ. ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಿವೆ.  ಸಾಕಷ್ಟು ಸಂಖ್ಯೆಯಲ್ಲಿ ಈ ಭಾಗದಿಂದ ಬಸ್ ಬೈಕ್ ರಿಕ್ಷಾ ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳು  ಶಾಲೆಗೆ ಹೋಗುತ್ತಿದ್ದಾರೆ. ಕಾರವಾರ ಇಳಕಲ್ ರಾಜ್ಯ ರಸ್ತೆ  ಕೂಡಲೇ ದುರಸ್ತಿ  ಕೈಗೊಳ್ಳಬೇಕೆಂದು  ಕರವೇ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

Vishwa News 24

Recent Posts

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

3 minutes ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

34 minutes ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

47 minutes ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

14 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

22 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

22 hours ago