ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ ಟಿಪ್ಪರ್ ಲಾರಿಯೊಂದು ಹಿಂಬದಿಯಿಂದ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಹಳೆಯಂಗಡಿ ಇಂದಿರಾ ನಗರ ಬಸ್ ನಿಲ್ದಾಣದ ಬಳಿ ಬುಧವಾರ (ಮೇ 27) ನಡೆದಿದೆ.
ಕಿನ್ನಿಗೋಳಿಯಿಂದ ಮಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸರ್ವಿಸ್ ಬಸ್ ಬುಧವಾರ ಹಳೆಯಂಗಡಿಯ ಇಂದಿರಾ ನಗರ ಬಸ್ ನಿಲ್ದಾಣದ ಬಳಿ ತಲುಪಿತ್ತು. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಸಲುವಾಗಿ ಬಸ್ ಚಾಲಕ ವಾಹನವನ್ನು ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಹಿಂಬದಿಯಿಂದ ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಬಸ್ಸಿನ ಹಿಂಭಾಗಕ್ಕೆ ರಭಸವಾಗಿ ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:
ಢಿಕ್ಕಿಯ ತೀವ್ರತೆಗೆ ಬಸ್ಸಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಾಗೂ ಇತರ ಪ್ರಯಾಣಿಕರು ತಕ್ಷಣವೇ ನೆರವಾಗಿದ್ದು, ಗಾಯಗೊಂಡ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…