ಹಳೆಯಂಗಡಿ: ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಯವರ ತಂದೆ ಅಂಗಡಿಮಾರ್ ಕೃಷ್ಣ ಭಟ್ ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಸ್ವಗೃಹದಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದರು. ಅವರಿಗೆ 102 ವರ್ಷ ವಯಸ್ಸಾಗಿತ್ತು
ಪುತ್ರ ವಿಶ್ವೇಶ್ವರ ಭಟ್ ಜೊತೆ ವಾಸವಿದ್ದ ಅವರು ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ದಿವಂಗತರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು.
ಐದು ವೇದಗಳನ್ನು ಅಧ್ಯಯನ ಮಾಡಿರುವ ಇವರು ಸಂಹಿತಾ ಯಾಗಗಳು, ಮತ್ತಿನ್ನಿತರ ಯಾಗಗಳನ್ನು ಮಾಡಿರುವ ಸಾಧಕರೆನಿಸಿದ್ದರು. ದಶಕಗಳ ಹಿಂದೆ ಪತ್ನಿ ಯಮುನಾ ಭಟ್ ಅವರನ್ನು ಕಳೆದುಕೊಂಡಿದ್ದ ಇವರು ತನ್ನ ಎಂಟನೇ ಪುತ್ರ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ರ ಸಹಿತ ಐದು ಮಂದಿ ಪುತ್ರರು ಹಾಗೂ ಏಳು ಮಂದಿ ಪುತ್ರಿಯರನ್ನು ಅಲ್ಲದೇ ಅಪಾರ ಅಭಿಮಾನಿಗಳನ್ನು ಅಗಲಿರುವರು.
ಇವರು ಗೈದಿರುವ ಜೀವಮಾನ ಸಾಧನೆಗಾಗಿ ಕೃಷ್ಣಾನುಗ್ರಹ ಪ್ರಶಸ್ತಿ, ಕಲ್ಕೂರ ಪ್ರತಿಷ್ಠಾನದಿಂದ ನೀಡಲಾದ ಪೇಜಾವರ ಶ್ರೀ ಜೀವಮಾನ ಪ್ರಶಸ್ತಿ, ಬ್ರಾಹ್ಮಣರ ಸಮ್ಮೇಳನದ ಗೌರವ ಪುರಸ್ಕಾರ ಸಹಿತ ಅನೇಕಾನೇಕ ಗೌರವಾಭಿನಂದನೆಳು ಪ್ರಾಪ್ತವಾಗಿವೆ. ಇಂದು ಮಧ್ಯಾಹ್ನ 12 ಕ್ಕೆ ಪಕ್ಷಿಕೆರೆಯ ಸ್ವಗೃಹದಲ್ಲಿ ಅಂತ್ಯಕ್ರಿಯೆ ಜರಗಲಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…