ಮಂಗಳೂರು: ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಹಳೆಯಂಗಡಿ ಆಟೋರಿಕ್ಷಾ ಚಾಲಕ ಸಂಪತ್ ಕರ್ಕಡ (50) ಎಂಬವರು ಮೃತದೇಹ ಹೆಜಮಾಡಿ ಟೋಲ್ ಗೆಟ್ ಸಮೀಪ ಅವರಾಳು,ಮಟ್ಟು ಎಂಬಲ್ಲಿನ ಶಾಂಭವಿ ನದಿಯ ನಿರ್ಮಾಣ ಹಂತದ ಸೇತುವೆಯ ಬಳಿ ಪತ್ತೆಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.
ಹಳೆಯಂಗಡಿ ರಿಕ್ಷಾ ನಿಲ್ದಾಣದಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಅವಿವಾಹಿತ ಸಂಪತ್ ಅವರು ಸರಳ ಸಜ್ಜನಿಕೆಯ ವ್ಯಕ್ತಿ ಆಗಿದ್ದರು.
ಕಳೆದ ಮೂರು ತಿಂಗಳ ಹಿಂದಷ್ಷೇ ಸಂಪತ್ ರವರ ಸಹೋದರ ರಿಕ್ಷಾ ಚಾಲಕ ನಮೀನ್ ಕರ್ಕಡ ಎಂಬುವವರು ಹಳೆಯಂಗಡಿ ಸಮೀಪ ರೈಲಿಗೆ ತಲೆಕೊಟ್ಟು ಮೃತಪಟ್ಟಿದ್ದರು.
ಇದೀಗ ಮೂರು ತಿಂಗಳ ಅಂತರದಲ್ಲಿ ಒಂದೇ ಕುಟುಂಬದ ಎರಡು ಜೀವ ದಾರುಣ ಸಾವನ್ನಪ್ಪಿರುವುದು ಸಂಪತ್ ಅವರ ಕುಟುಂಬಕ್ಕೆ ಆಘಾತ ಉಂಟಾಗಿದೆ. ಪಡುಬಿದ್ರೆ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…