Featured

ಹಳೆಯಂಗಡಿ: ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬರುವುದು ನಮ್ಮ ಗುರಿಯಾಗಬೇಕು : ರಕ್ಷಾ ರಾಮಯ್ಯ -Vishwanews24

ಹಳೆಯಂಗಡಿ: ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬರುವುದು ನಮ್ಮ ಗುರಿಯಾಗಬೇಕು : ರಕ್ಷಾ ರಾಮಯ್ಯ -Vishwanews24

ಮುಲ್ಕಿ: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭ ಅವರನ್ನು ಮಾಜಿ ಸಚಿವ ಅಭಯಚಂದ್ರ, ಯುವನಾಯಕ ಮಿಥುನ್ ರೈ, ಮೂಲ್ಕಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ ಸ್ವಾಗತಿಸಿದರು.

ಸಭೆಯಲ್ಲಿ ರಕ್ಷಾ ರಾಮಯ್ಯ ಮಾತನಾಡಿ ಕೋವಿಡ್ ಸಮಯದಲ್ಲಿ ದೇಶದಲ್ಲೆಡೆ ಯುವ ಕಾಂಗ್ರೆಸ್ ಕಾರ್ಯಕರ್ತರ ಪಡೆ ಕೊರೊನ ನಿರ್ಮೂಲನೆಗೆ ಪಣತೊಟ್ಟು ಸಂಕಷ್ಟಕ್ಕೀಡಾದ ವರಿಗೆ ಐಸೋಲೇಶನ್ ಕಿಟ್ ಸಹಿತ ನಿರಾಶ್ರಿತರ, ದುರ್ಬಲ ವರ್ಗದವರ ಏಳಿಕೆಗಾಗಿ ಶ್ರಮಿಸಿದ್ದು ನಂಬರ್ ವನ್ ಎನಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ನಮ್ಮೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬರುವುದು ನಮ್ಮ ಗುರಿಯಾಗಬೇಕು ಎಂದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ಪಕ್ಷಕ್ಕಾಗಿ ನಿಷ್ಠ ಹಾಗೂ ಪ್ರಾಮಾಣಿಕತೆಯಿಂದ ದುಡಿದರೆ ಅಧಿಕಾರ ತನ್ನಿಂತಾನೆ ಹುಡುಕಿಕೊಂಡು ಬರುತ್ತದೆ. ಕಾಂಗ್ರೆಸ್ ಪಕ್ಷದ ಹಲವಾರು ನಾಯಕರು ಯೂತ್ ಕಾಂಗ್ರೆಸ್ಸಿನಿಂದ ಶಾಸಕರಾಗಿ ದ್ದಾರೆ ಎಂದರು.

ಈ ಸಂದರ್ಭ ರಾಷ್ಟ್ರೀಯ ಯುವ ಕಾಂಗ್ರೆಸ್ ನಾಯಕರಾದ ಅನಿಲ್ ಯಾದವ್, ಸುರಭಿ ದ್ವಿವೇದಿ, ವಿದ್ಯಾ ,ಭವ್ಯ, ಮೇರಿಲ್ ರೆಗೋ, ದೇವಿಕಾ ರೆಡ್ಡಿ, ಮನ್ನಾರ್ ಮನ್ನನ, ಹನುಮ ಕಿಶೋರ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಕೆಪಿಸಿಸಿ ವಕ್ತಾರ ವಸಂತ್ ಬೆರ್ನಾಡ್, ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಬೊಳ್ಳೂರು, ಮತ್ತಿತರರು ಉಪಸ್ಥಿತರಿದ್ದರು

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

5 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

5 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

5 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

8 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

8 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago