ಹಳೆಯಂಗಡಿ: ಮದುವೆ ಸಂಭ್ರಮದಲ್ಲಿದ್ದ ವಧು-ವರರು ವರನ ಮೊದಲ ಪತ್ನಿ ಮದುವೆ ಮಂಟಪಕ್ಕೆ ಆಗಮಿಸುತ್ತಿದ್ದಂತೆ ಪರಾರಿಯಾದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬಳಿ ನಡೆದಿದೆ.
ಶಿವಮೊಗ್ಗ-ಮೂಡಬಿದಿರೆ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ ಚಾಲಕನಾಗಿರುವ ತೀರ್ಥಹಳ್ಳಿ ಮೂಲದ 40 ವರ್ಷದ ವ್ಯಕ್ತಿ ಮತ್ತು ಸಸಿಹಿತ್ಲು ಮೂಲದ ಯುವತಿಗೆ ಇಲ್ಲಿನ ಮದುವೆ ಮಂಟಪದಲ್ಲಿ ಗುರುವಾರ ಮದುವೆ ನಿಶ್ಚಯವಾಗಿತ್ತು. ಮದುವೆ ಹಾಲ್‌ನಲ್ಲಿ ಧಾರಾಕಾರ್ಯಕ್ಕೂ ಮುನ್ನ ವಧು-ವರರ ಫೋಟೋಶೂಟ್ ನಡೆಯುತ್ತಿತ್ತು. ಈ ವೇಳೆ ವರನ ಮೊದಲ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬಳು ಮಂಟಪಕ್ಕೆ ಆಗಮಿಸಿದ್ದಾಳೆ. ಅಲ್ಲದೆ, ಒಬ್ಬ ಗಂಡು ಮಗು ಇದೆ ಎಂದೂ ಆಕೆ ಹೇಳಿದ್ದರು. ಈ ವಿಷಯ ವರನ ಕಿವಿಗೆ ಬೀಳುತ್ತಿದ್ದಂತೆ ಫೋಟೋಶೂಟ್ ನಡೆಯುತ್ತಿದ್ದಲ್ಲಿಂದಲೇ ವಧುವನ್ನು ಕರೆದುಕೊಂಡು ಚಿನ್ನಾಭರಣ ಸಹಿತ ಕಾರಿನಲ್ಲಿ ಕುಳ್ಳಿರಿಸಿಕೊಂಡು ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವರನ ಕಡೆಯಿಂದ ಐವರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದೆ.
ವರ ಈ ಹಿಂದೆ ಮದುವೆಯಾಗಿರುವ ವಿಷಯ ವಧುವಿಗೆ ತಿಳಿದಿತ್ತಾದರೂ, ಇಬ್ಬರು ಪ್ರೀತಿಸುತ್ತಿದ್ದರು. ಅಲ್ಲದೆ, ಆತ ಮೊದಲ ಪತ್ನಿಗೆ ವಿಚ್ಚೇದನ ನೀಡಲು ಅರ್ಜಿ ಹಾಕಿದ್ದಾನೆ ಎಂದೂ ತಿಳಿಸಿಲ್ಲ. ಯಾವುದೇ ವಿಚಾರವನ್ನು ವಧು ಮನೆಯಲ್ಲಿ ಹೇಳಿರಲಿಲ್ಲ ಎನ್ನಲಾಗಿದೆ. ಮೂಲ್ಕಿ ಪೊಲೀಸ್ ಠಾಣೆಗೆ ವಧುವಿನ ಪೋಷಕರು ತೆರಳಿ ಮಾಹಿತಿ ನೀಡಿದ್ದು, ಚಿನ್ನಾಭರಣ ಹಿಂತಿರುಗಿಸಿಕೊಡುವಂತೆ ಮನವಿ ಮಾಡಿದ್ದಾರೆ. ಮಾಡಿದ ಅಡುಗೆ ಕೂಡಾ ಹಾಗೆಯೇ ಉಳಿದಿದ್ದು, ಸಭಾಂಗಣದವರು ಊಟವನ್ನು ಊರಿನವರಿಗೆ ಹಂಚಿದ್ದಾರೆ.
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…