ಮಲ್ಪೆ: ಶನಿವಾರ ಮಲ್ಪೆ ಮೀನುಗಾರಿಕೆ ಬಂದರಿನಿಂದ ಸುಮಾರು 70-80ರಷ್ಟು ದೋಣಿಗಳು ಮೀನುಗಾರಿಕೆಗೆ ತೆರಳಿದ್ದವು. ಬಹುತೇಕ ದೋಣಿಗಳು ರವಿವಾರ ರಾತ್ರಿಯಿಂದ ಆಳಸಮುದ್ರಕ್ಕೆ ತೆರಳಲು ಸಿದ್ಧವಾಗಿವೆ.
ಕೆಲವು ದಿನಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕ್ಯಾರ್ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಮೀನು ಗಾರಿಕೆಗೆ ತೆರಳಿದ ಎಲ್ಲ ಬೋಟುಗಳು ದಡ ಸೇರಿದ್ದವು. ಅದು ಒಮಾನ್‌ನತ್ತ ಮುಖ ಮಾಡಿದ ಬಳಿಕ ಮೀನುಗಾರಿಕೆ ಆರಂಭಿಸಲು ಸಿದ್ಧತೆ ನಡೆದಿದ್ದರೂ “ಮಹಾ’ ಉಂಟಾಗುವ ಎಚ್ಚರಿಕೆ ಮೀನುಗಾರರನ್ನು ತತ್ತರಿಸುವಂತೆ ಮಾಡಿತ್ತು. ಹವಾಮಾನ ಮತ್ತು ಮೀನುಗಾರಿಕೆ ಇಲಾಖೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿತ್ತು. ಸಮುದ್ರ ಪ್ರಕ್ಷುಬ್ಧಗೊಂಡು ಕೆಲವೆಡೆ ಸಮುದ್ರ ಕೊರೆತ ಕಾಣಿಸಿಕೊಂಡಿತ್ತು.
ಪಶ್ಚಿಮ ಸಮುದ್ರದಲ್ಲಿ ಉಂಟಾಗುತ್ತಿರುವ ಹವಾಮಾನ ವೈಪರೀತ್ಯದಿಂದ ಕರಾವಳಿಯ ಮೀನುಗಾರಿಕೆ ತತ್ತರಿಸಿದೆ. ಈ ಋತುವಿನ ಆರಂಭದಿಂದಲೇ ಸಮಸ್ಯೆಗಳು ಎದುರಾಗಿರುವುದರಿಂದ ನಿರೀಕ್ಷಿತ ಲಾಭ ದೊರೆತಿಲ್ಲ. ಬೋಟುಗಳು ಸಂಪೂರ್ಣ ನಷ್ಟವನ್ನು ಅನುಭವಿಸುತ್ತಿವೆ.
ತೀರದಲ್ಲಿ ಶಾಂತವಾಗಿದ್ದರೂ ಆಳ ಸಮುದ್ರದಲ್ಲಿ ಅಲೆಗಳ ಅಬ್ಬರ ಇರುವ ಸಾಧ್ಯತೆ ಇದೆ. ಇಲಾಖೆಯ ಸೂಚನೆಯನ್ವಯ ಡೀಸೆಲ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ. ಮಲ್ಪೆ ಬಂದರಿನಿಂದ ಶೇ. 20ರಷ್ಟು ಬೋಟುಗಳು ಮೀನುಗಾರಿಕೆಗೆ ತೆರಳಿವೆ.
“ಮಹಾ’ ಚಂಡಮಾರುತದ ಪ್ರಭಾವ ನ. 6ರ ವರೆಗೆ ಇರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲಿಯವರೆಗೂ ಡೀಸೆಲ್ ಪೂರೈಕೆ ನಿಲ್ಲಿಸುವಂತೆ ಬಂಕ್‌ಗಳಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಬಂದರಿನಲ್ಲಿ ನಿರಂತರವಾಗಿ ಘೋಷಣೆ ಮಾಡಲು ಸೂಚನೆ ಕೊಟ್ಟಿದೆ.
-ಗಣೇಶ್ ಕೆ., ಉಪ ನಿರ್ದೇಶಕರು, ಮೀನುಗಾರಿಕೆ ಇಲಾಖೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…