Featured

ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ- ವಿವಾದಾತ್ಮಕ ಹೇಳಿಕೆ ನೀಡಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಹಸಿರು ಶಾಲು ಹಾಕಿದವರೆಲ್ಲ ರೈತರಲ್ಲ ಎಂದು ಸಚಿವ ಡಿ.ಕೆ. ಶಿವಕುಮಾರ್ ವಿವಾದಾತ್ಮಕ ಹೇಳಿಕೆಯನ್ನು ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಮ್ಮ ಸರ್ಕಾರವನ್ನು ಹಳದಿ ಕಣ್ಣಿನಲ್ಲಿ ನೋಡುತ್ತಿದ್ದಾರೆ. ಈ ಸರ್ಕಾರದ ಯಶಸ್ಸಿನ ಕಾರ್ಯಕ್ರಮವನ್ನು ನೋಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ನಾವು ಸಾವಿರಾರು ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದೇವೆ. ಈಗಾಗಲೇ 40,000 ಕೋಟಿ ರೂ.ವನ್ನು ಕೊಟ್ಟಿದ್ದೇವೆ. ಆದ್ದರಿಂದ ಅವರಿಗೆ ಇದನ್ನು ಡೈಜೆಸ್ಟ್ ಮಾಡಿಕೊಳ್ಳೋಕೆ ಆಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ..

ಇಂದು ಬ್ಯಾಂಕರ್ಸ್ ಜೊತೆಯೂ ಮಾತನಾಡಿದ್ದೇವೆ. ಅದನ್ನು ಅವರ ಕೈಯಲ್ಲಿ ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಅಸೆಂಬ್ಲಿಯಲ್ಲಿ ಯಡಿಯೂರಪ್ಪ ಅವರು, ಯಾವ ಬ್ಯಾಂಕ್ ಅವರು ಅಷ್ಟು ಗ್ಯಾರಂಟಿಯ ಮೇಲೆ ಸಾಲ ಕೊಡುತ್ತಾರೆ ಎಂದು ಕೇಳುತ್ತಿದ್ದರು. ಜೊತೆಗೆ ಬ್ಯಾಂಕ್ ಅವರ ಜೊತೆ ಅವರು ಮಾತನಾಡಿ ಇದು ಯಶಸ್ವಿಯಾಗುತ್ತಿದೆ ಎಂದು ತಿಳಿದ ಮೇಲೆ ಜನರನ್ನು ತಪ್ಪು ದಾರಿಗೆ ಎಳೆದುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ. ಹಸಿರು ಶಾಲು ಹಾಕಿಕೊಂಡವರೆಲ್ಲ ರೈತರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಜೆಟ್ ಆಗಿ ಇನ್ನು ಒಂದು ತಿಂಗಳಾಗಿಲ್ಲ. ರೈತರು ಸದ್ಯಕ್ಕೆ ಖುಷಿಯಲ್ಲಿದ್ದಾರೆ. ಇದನ್ನ ತಪ್ಪಿಸಲು ರೈತರಿಗೆ ವಿಷದ ಬೀಜ ಬಿತ್ತುತ್ತಿದ್ದಾರೆ. ಇದು ಇಡೀ ನಮ್ಮ ರಾಜ್ಯ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಅತೀ ದೊಡ್ಡ ಮಾರಕ ಅಂತ ಆಕ್ರೋಶದಿಂದ ಹೇಳಿದ್ದಾರೆ.

ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ರಾಮನಗರದಿಂದ ಈ ಪಾದಯಾತ್ರೆ ಆರಂಭವಾಗಿದ್ದು, ಇಂದು ಬೆಂಗಳೂರಿಗೆ ಆಗಮನವಾಗಿದೆ. ಬಿಜೆಪಿ ಹಾಗೂ ರೈತ ಸಂಘಟನೆ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯುತ್ತಿದೆ. ಕೆಂಗೇರಿಯ ಬಂಡೆ ಮಠದಿಂದ ಪಾದಯಾತ್ರೆ ಪ್ರಾರಂಭವಾಗಿ ಮಧ್ಯಾಹ್ನ ಫ್ರೀಡಂ ಪಾರ್ಕ್ ನಲ್ಲಿ ಪಾದಯಾತ್ರೆ ಅಂತ್ಯವಾಗಿದೆ. ಈ ಪಾದಯಾತ್ರೆಯಲ್ಲಿ ನೂರಾರು ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

5 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

5 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

6 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

6 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

9 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

10 hours ago