ಹಸುಗಳನ್ನು ಸಾಗಿಸುತ್ತಿದ್ದ ಐಷಾರಾಮಿ ಕಾರು ಅಪಘಾತ : ಸ್ಥಳದಲ್ಲಿಯೇ ಐದು ಜಾನುವಾರಗಳ ಸಾವು -Vishwanews24
ಬೆಳ್ತಂಗಡಿ: ಹಸುಗಳನ್ನು ಸಾಗಿಸುತ್ತಿದ್ದ ಐಷಾರಾಮಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಐದು ಜಾನುವಾರಗಳು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಎಂಬಲ್ಲಿ ನಡೆದಿದೆ.
ಕಳ್ಳರು ಐಷಾರಾಮಿ ಕಾರಿನಲ್ಲಿ ಆರು ಹಸುಗಳನ್ನು ಅಮಾನವೀಯ ರೀತಿಯಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದರು. ಆದರೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ಕಾರು ಅಪಘಾತಕ್ಕೀಡಾಗಿದೆ. ಪರಿಣಾಮ ಕಾರಿನಲ್ಲಿದ್ದ ಐದು ಹಸುಗಳು ಸಾವನ್ನಪ್ಪಿದ್ದು, ಹಸುವೊಂದರ ಸ್ಥಿತಿ ಗಂಭೀರವಾಗಿದೆ.

KA05MQ4824 ಸಂಖ್ಯೆಯ ಬೆಂಗಳೂರು ನೊಂದಣಿ ಕಾರು ಕಮರಿಗೆ ಉರುಳುತಿದ್ದಂತೆ ಕಾರಿನಲ್ಲಿದ್ದ ಅಕ್ರಮ ಗೋ ಸಾಗಾಟಗಾರರು ಪರಾರಿಯಾಗಿದ್ದು ಕಾರು ಸಂಪೂರ್ಣ ನಜ್ಜು ನುಜ್ಜಾಗಿದೆ. ಕಾರಿನೊಳಗೆ ಬ್ರೇಡ್ ಪ್ಯಾಕೇಟ್ ಪತ್ತೆಯಾಗಿದ್ದು, ಗೋವುಗಳಿಗೆ ಪ್ರಜ್ಞೆ ತಪ್ಪಿಸಿವ ಸಲುವಾಗಿ ಬ್ರೇಡ್ ನಲ್ಲಿ ವಿಷಕಾರಿ ವಸ್ತುಗಳನ್ನು ತಿನ್ನಿಸಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
