Featured

ಹಸುಗಳ ಕೆಚ್ಚಲು ಕೊಯ್ದು ಪ್ರಕರಣ : ಓರ್ವ ಆರೋಪಿ ಬಂಧನ – vishwanews24

ಹಸುಗಳ ಕೆಚ್ಚಲು ಕೊಯ್ದು ಪ್ರಕರಣ : ಓರ್ವ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ 3 ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಓರ್ವ ಆರೋಪಿಯನ್ನು ಪೊಲೀಸರು ಭಾನುವಾರ ತಡರಾತ್ರಿ (ಜ.12) ಬಂಧಿಸಿರುವುದಾಗಿ ವರದಿ ತಿಳಿಸಿದೆ.

ಭಾನುವಾರ ರಾತ್ರಿ ಕಾಟನ್ ​ಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿರುವ ಸೈಯದ್ ನಸ್ರು (30) ಬಂಧಿತ ಆರೋಪಿ. ಘಟನೆ ನಡೆದ ಸ್ಥಳದಿಂದ 50 ಮೀಟರ್‌ ದೂರದಲ್ಲಿರುವ ಪ್ಲಾಸ್ಟಿಕ್‌ ಹಾಗೂ ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಶೇಕ್‌ ನಸ್ರು ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಂಧಿಸಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಏನಿದು ಘಟನೆ?:
ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿತ್ತು.ಭಾನುವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿತ್ತು.

ಕರ್ಣ ಎಂಬುವವರಿಗೆ ಸೇರಿದ ಮೂರು ಹಸುಗಳ ಕೆಚ್ಚಲು ಕೊಯ್ದು, ಕಿಡಿಗೇಡಿಗಳು ಪರಾರಿ ಆಗಿದ್ದರು. ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 8 ಹಸುಗಳ ಸಾಕಿರುವ ಕರ್ಣ ಈ ಪೈಕಿ ಮೂರರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ತಡರಾತ್ರಿ ಕಿಡಿಗೇಡಿಗಳು ಕೊಯ್ದಿದ್ದರು.

ಈ ಸಂಬಂಧ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ​ದೂರು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು, ಬಿಜೆಪಿ ಮುಖಂಡರು ಕ್ರಮಕ್ಕೆ ಆಗ್ರಹಿಸಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

11 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

11 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

11 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

14 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

14 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

15 hours ago