ಬೆಂಗಳೂರು, : ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ (77) ಅವರು ಜೂ ೮ ರ ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಉದಾಸಿ ಅವರು ನಾರಾಯಣ ಹೃದಯಾಲಯದಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಅರೋಗ್ಯದಲ್ಲಿ ಏರುಪೇರಾದ ಕಾರಣ ಉದಾಸಿ ಅವರನ್ನು ಮೇ.25ರಂದು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬೊಮ್ಮಾಯಿ ಆಸ್ಪತ್ರೆಗೆ ಬೇಟಿ ನೀಡಿ ಅವರ ಅರೋಗ್ಯದ ಬಗ್ಗೆ ವಿಚಾರಿಸಿದ್ದರು.
ಬುಧವಾರ ಹಾನಗಲ್ ಗೆ ಮೃತದೇಹ ಕೊಂಡೊಯ್ದು ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಪುತ್ರ ಸಂಸದ ಶಿವಕುಮಾರ್ ಉದಾಸಿ ಹೇಳಿಕೆ ನೀಡಿದ್ದಾರೆ.
1983 ರಲ್ಲಿ ಮೊದಲ ಬಾರಿಗೆ ವಿಧಾನಸಭೆಯನ್ನು ಪಕ್ಷೇತರರಾಗಿ ಪ್ರವೇಶಿಸಿದ್ದರು. ಉದಾಸಿ ಅವರು ಯಡಿಯೂರಪ್ಪ ಅವರ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸಾರಿಗೆ, ಲೋಕೋಪಯೋಗಿ ಖಾತೆಯನ್ನು ನಿರ್ವಹಿಸಿದ್ದರು.
ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…