ಹಾರ್ದಿಕ್ ಪಟೇಲ್ ಜೂನ್ 2ರಂದು ಬಿಜೆಪಿ ಸೇರ್ಪಡೆ – Vishwanews24

Featured, ರಾಷ್ಟ್ರ ನ್ಯೂಸ್

ಹಾರ್ದಿಕ್ ಪಟೇಲ್ ಜೂನ್ 2ರಂದು ಬಿಜೆಪಿ ಸೇರ್ಪಡೆ – Vishwanews24

ಗುಜರಾತ್‌: ಗುಜರಾತ್ ಕಾಂಗ್ರೆಸ್‍ನ ಮಾಜಿ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಲಿದ್ದಾರೆ.

ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ಅವರ ನಿರ್ಧಾರವು ಗುಜರಾತ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿಯೇ ಮಹತ್ವ ಪಡೆದುಕೊಂಡಿದೆ.

ಪಾಟಿದಾರ್‌ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್‌ ಪಟೇಲ್‌ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದನ್ನು ಸುದ್ದಿ ಸಂಸ್ಥೆಯೊಂದಕ್ಕೆ ಖಚಿತಪಡಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ತಮ್ಮನ್ನುಅವಗಣನೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದ ಹಾರ್ದಿಕ್‌ ಬಳಿಕ ಕಾಂಗ್ರೆಸ್‌ ತೊರೆದಿದ್ದರು. ಕಾಂಗ್ರೆಸ್‌ ಬಗ್ಗೆ ಅವರು ಅಸಮಾಧಾನ ತೋಡಿಕೊಂಡಿದ್ದ ಬೆನ್ನಲ್ಲೇ ಹಾರ್ದಿಕ್‌ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹರಡಿದ್ದವು. ಇದೀಗ ಅದು ಖಚಿತವಾಗಿದೆ. ಗುಜರಾತ್‌ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಅವರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ.

 ಉಡುಪಿ : ವಿವಿಧ ಹುದ್ದೆಗಳಿಗೆ: ಅರ್ಜಿ ಆಹ್ವಾನ – Vishwnaews24

Leave a Reply