ಗುಜರಾತ್: ಗುಜರಾತ್ ಕಾಂಗ್ರೆಸ್‍ನ ಮಾಜಿ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಲಿದ್ದಾರೆ.
ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ಅವರ ನಿರ್ಧಾರವು ಗುಜರಾತ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿಯೇ ಮಹತ್ವ ಪಡೆದುಕೊಂಡಿದೆ.
ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದನ್ನು ಸುದ್ದಿ ಸಂಸ್ಥೆಯೊಂದಕ್ಕೆ ಖಚಿತಪಡಿಸಿದ್ದಾರೆ.
ಕಾಂಗ್ರೆಸ್‌ನಲ್ಲಿ ತಮ್ಮನ್ನುಅವಗಣನೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದ ಹಾರ್ದಿಕ್ ಬಳಿಕ ಕಾಂಗ್ರೆಸ್ ತೊರೆದಿದ್ದರು. ಕಾಂಗ್ರೆಸ್ ಬಗ್ಗೆ ಅವರು ಅಸಮಾಧಾನ ತೋಡಿಕೊಂಡಿದ್ದ ಬೆನ್ನಲ್ಲೇ ಹಾರ್ದಿಕ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹರಡಿದ್ದವು. ಇದೀಗ ಅದು ಖಚಿತವಾಗಿದೆ. ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಅವರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…