Featured

ಹಾರ್ಮುಜ್ ಜಲಸಂಧಿ ದಾಟಿ 26,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ಮಂಗಳೂರು ಬಂದರು ತಲುಪಿದ ‘ಶಿವಾಲಿಕ್’ ಹಡಗು – vishwanews24

ಹಾರ್ಮುಜ್ ಜಲಸಂಧಿ ದಾಟಿ 26,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ಮಂಗಳೂರು ಬಂದರು ತಲುಪಿದ ‘ಶಿವಾಲಿಕ್’ ಹಡಗು

ಮಂಗಳೂರು: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆ 26,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿ ನವ ಮಂಗಳೂರು ಬಂದರಿನ ಎಲ್‌ಪಿಜಿ ಟರ್ಮಿನಲ್‌ಗೆ ಬಂದು ತಲುಪಿದೆ.

ಒಟ್ಟು 46,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತಿದ್ದ ಶಿವಾಲಿಕ್ ನೌಕೆಯು, ಹಾರ್ಮುಜ್ ಜಲಸಂಧಿಯ ಮೂಲಕ ಪ್ರಯಾಣಿಸಿ ಮಾರ್ಚ್ 16 ರಂದು ಗುಜರಾತ್‌ನ ಮುಂದ್ರಾ ಬಂದರನ್ನು ತಲುಪಿತ್ತು. ಅಲ್ಲಿ 20,000 ಮೆಟ್ರಿಕ್ ಟನ್ ಅನಿಲವನ್ನು ಇಳಿಸಿದ ನಂತರ, ಬಾಕಿ ಉಳಿದ 26,000 ಮೆಟ್ರಿಕ್ ಟನ್ ಎಲ್‌ಪಿಜಿ ಯನ್ನು ಹೊತ್ತು ಇದೀಗ ಮಂಗಳೂರು ಬಂದರಿಗೆ ತಲುಪಿದೆ.

ಇದನ್ನೂ ಓದಿ:

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಆರ್ಡರ್ ಮಾಡಿದ್ದ ಎಲ್‌ಪಿಜಿಯನ್ನು ಈ ನೌಕೆಯು ಸಾಗಿಸುತ್ತಿದೆ. ಈ ಎಲ್‌ಪಿಜಿ ತೈಲ ಟ್ಯಾಂಕರ್ ಹೊತ್ತ ಹಡಗು ಮಾರ್ಚ್ ಮೊದಲ ವಾರದಲ್ಲಿ ಟ್ಯಾಂಕರ್ ಕತಾರ್‌ನ ರಾಸ್ ಲಫಾನ್ ಆಂಕಾರೇಜ್‌ನಿಂದ ಹೊರಟಿತ್ತು.

ಯುದ್ಧಪೀಡಿತ ಹಾರ್ಮುಜ್ ಜಲಸಂಧಿಯನ್ನು ಎಲ್‌ಪಿಜಿ ಟ್ಯಾಂಕರ್ ಹೊತ್ತ ಶಿವಾಲಿಕ್ ಮತ್ತು ನಂದಾದೇವಿ ಈ ಮೊದಲು ಹಾರ್ಮುಜ್ ಜಲಸಂಧಿಯನ್ನು ದಾಟಲು ಸಾಧ್ಯವಾಗಿರಲಿಲ್ಲ. ಆದರೆ, ಇರಾನ್ ಸರ್ಕಾರವು ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿ ನೀಡಿದ ನಂತರ, ಈ ಎರಡು ಹಡಗುಗಳು ತಮ್ಮ ಪ್ರಯಾಣವನ್ನು ಪುನರಾರಂಭಿಸಿ ಈಗ ಭಾರತವನ್ನು ತಲುಪಿವೆ.

ಇದನ್ನೂ ಓದಿ:

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

4 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

4 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

4 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

8 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

8 hours ago