ಹಾಲಾಡಿ ಶ್ರೀನಿವಾಸ ಶೆಟ್ಟಿ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ತ್ಯಜಿಸಿ ಪಕ್ಷೇತರರಾಗಿ ಬಿಜೆಪಿ ವಿರುದ್ದವೇ ಗೆದ್ದು ಬಂದಿದ್ದರು. ಇದೀಗ ಮತ್ತೆ ವಲಸಿಗರಾಗಿ ಬಿಜೆಪಿ ಸೇರಿರುವ ಹಾಲಾಡಿ ಮತ್ತೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರು.
ಈ ವೇಳೆ ಯಡಿಯೂರಪ್ಪ ಸ್ವತಃ ಬಹಿರಂಗವಾಗಿ ಹಾಲಾಡಿಯೇ ಮುಂದಿನ ಅಭ್ಯರ್ಥಿ ಎಂದು ಘೋಷಿಸಿದ್ರು ಇದು ಭಿನ್ನಮತಕ್ಕೆ ಮತ್ತಷ್ಟು ತುಪ್ಪ ಸುರಿದ ಕ್ಷಣವಾಗಿತ್ತು, ಅಂದಿನಿಂದ ಬೂದಿ ಮುಚ್ಚಿದ್ದ ಈ ಭಿನ್ನಮತದ ಕಿಡಿ ಇದೀಗ ಸ್ಪೋಟಗೊಂಡು ಜಿಲ್ಲಾಬಿಜೆಪಿ ಅಧ್ಯಕ್ಷರಿಗೆ ಪದಾಧಿಕಾರಿಗಳು ರಾಜಿನಾಮೆ ನೀಡಿ ಹಾಲಾಡಿ ವಿರುದ್ದ ಪ್ರಚಾರ ಕೈಗೊಳ್ಳುವವರೆಗೆ ತಲುಪಿದೆ.
ಇದೀಗ ರಾಜಿನಾಮೆ ನೀಡಿದ ಪದಾಧಿಕಾರಿಗಳು ಹಾಲಾಡಿ ವಿರುದ್ಧ ಕೆಲಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಕಾರ್ಯಕರ್ತರು ಕಿಡಿಕಾರಿದ್ದಾರೆ. ಬಿಜೆಪಿಯಲ್ಲಿ ಪಕ್ಷ ತೊರೆದು ಬಂದವರಿಗೆ ಮಾತ್ರ ಅವಕಾಶ ಸ್ಥಾನಮಾನದ ಹುದ್ದೆ ಸಿಗುತ್ತೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ ಎಂದು ರಾಜಿನಾಮೆ ನೀಡಿದ್ದ ಮೂಲ ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ.
ಒಟ್ಟಿನಲ್ಲಿ ಪರದೆ ಹಿಂದೆಯಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಭಿನ್ನಮತ ಇದೀಗ ಸ್ಪೋಟಗೊಂಡಿದ್ದು ಈ ಮೂಲಕ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಈ ಪಕ್ಷದ ಪದಾಧಿಕಾರಿಗಳೇ ರಾಜಿನಾಮೆ ನೀಡಿ ಅಭ್ಯರ್ಥಿ ವಿರುದ್ದ ಕೆಲಸ ಮಾಡಲು ಹೊರಟಿರುವುದು ಪಕ್ಷಕ್ಕೆ ಅಡ್ಡಪರಿಣಾಮ ಆಗೋದ್ರಲ್ಲಿ ಎರಡು ಮಾತಿಲ್ಲ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…