ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮತ್ತು ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಗಬೇಕು : ರಘುಪತಿ ಭಟ್ -Vishwanews24
ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮತ್ತು ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಗಬೇಕು : ರಘುಪತಿ ಭಟ್ -Vishwanews24
ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ..
ಉಡುಪಿ: ರಾಜ್ಯ ಮಂತ್ರಿಮಂಡಲ ವಿಸ್ತರಣೆಯಾದರೆ ಆದ್ಯತೆ ಮೇರೆಗೆ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗ ಮಾತನಾಡಿ ಆದ್ಯತೆಯ ಮೇರೆಗೆ ಅವರುಗಳಿಗೆ ಸಚಿವ ಸ್ಥಾನ ಸಿಗಬೇಕು, ನನಗೆ ನನ್ನ ಇತಿಮಿತಿ ಗೊತ್ತಿದೆ ಅಲ್ಲದೆ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದರು.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹಿರಿಯ ಶಾಸಕರಾಗಿದ್ದು ಅಲ್ಲದೆ ಹಾಲಾಡಿ ಸಚ್ಚಾರಿತ್ರ್ಯ, ಉತ್ತಮ ವ್ಯಕ್ತಿತ್ವದ ಶಾಸಕರಾಗಿದ್ದಾರೆ. ಹಾಲಾಡಿ ಶ್ರೀನಿವಾಸ ಶೆಟ್ಟರಿಂದ ಬಿಜೆಪಿಗೆ ಬಹಳ ಗೌರವ ಇದೆ. ಅದೇ ರೀತಿ ಸುನಿಲ್ ಕುಮಾರ್ ಹಿಂದುಳಿದ ವರ್ಗದ ನಾಯಕ ಸುನೀಲ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಇವರಿಬ್ಬರಿಗೆ ಸಚಿವ ಸ್ಥಾನ ಕೊಟ್ಟರೆ ಪಕ್ಷಕ್ಕೆ ಒಳ್ಳೆಯದು ಎಂದರು.
