ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

Featured, ಉಡುಪಿ

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ

ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ ಸಂಪಾದಿಸಿ” ಎಂಬ ಆಕರ್ಷಕ ಜಾಹೀರಾತುಗಳನ್ನು ನಂಬಿದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಆಘಾತಕಾರಿ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ.

ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ ಎಂಬಾತನ ವಂಚನೆ ಪ್ರಕರಣ ಮಾಸುವ ಬೆನ್ನಲ್ಲೇ ಹಾವೇರಿಯಲ್ಲೂ ಅಮಾಯಕರಿಗೆ ವಂಚಿಸಿರೋ ಘಟನೆ ಬೆಳಕಿಗೆ ಬಂದಿದೆ. ಹಾವೇರಿ ನಗರದ ಅಶ್ವಿನಿ ನಗರದಲ್ಲಿ `ಎಸ್‌ಎಲ್‌ವಿ ಮಹಿಳಾ ಮಾರ್ಟ್ ಅಂಡ್ ಮಾರ್ಕೆಟಿಂಗ್’ ಹೆಸರಲ್ಲಿ ಕಚೇರಿ ತೆರೆದು ವರ್ಕ್ ಫ್ರಮ್ ಹೋಮ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಸಾವಿರಾರು ಮಹಿಳೆಯರಿಗೆ ವಂಚಿಸಿದ್ದಾರೆ. ಹಣ ಕಳೆದುಕೊಂಡವರು ನ್ಯಾಯಕೊಡಿಸುವಂತೆ ಠಾಣೆ ಮೆಟ್ಟಿಲೇರಿದ್ದಾರೆ. ಕೋಟ್ಯಾಂತರ ರೂಪಾಯಿ ವಂಚಿಸಿದ ವಿನಾಯಕ ಅನ್ವೇರಿ ಹಾಗೂ ರಮ್ಯಾ ಎಂಬುವವರು ಕಚೇರಿಗೆ ಬೀಗ ಹಾಕಿ ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: 

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಇನ್ನೂ ಹಾವೇರಿಯ ಈ ಖತರ್ನಾಕ್ ಜೋಡಿ ಅಗರಬತ್ತಿ, ಮೇಣದ ಬತ್ತಿ, ಕರ್ಪೂರ, ಧೂಪ, ಇತರೆ ಸಾಮಗ್ರಿಗಳನ್ನು ಕೊಡುತ್ತೇವೆ. ನೀವು ಅದನ್ನು ಮನೆಯಲ್ಲೇ ಪ್ಯಾಕಿಂಗ್ ಮಾಡಿಕೊಡಬೇಕು. ರಾಜ್ಯದಲ್ಲಿ ನಮ್ಮದು 9 ಶಾಖೆಗಳಿವೆ, ಕನಿಷ್ಠ 25 ಸಾವಿರ ರೂ.ನಿಂದ 5 ಲಕ್ಷ ರೂ.ವರೆಗೆ ಡೆಪಾಸಿಟ್ ಇಡಬೇಕು. ಒಂದು ಲಕ್ಷಕ್ಕೆ ಪ್ರತಿ ತಿಂಗಳಿಗೆ 26 ಸಾವಿರ ರೂ. ಆದಾಯ ಕೊಡುತ್ತೇವೆ ಎಂದು ನಂಬಿಸಿ ಮೋಸ ಮಾಡಿದ್ದಾರೆ. ಅಂದಾಜು 10 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ನೊಂದ ಮಹಿಳೆಯರು ಆರೋಪಿಸ್ತಿದ್ದಾರೆ.

Leave a Reply