ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ ಸಂಪಾದಿಸಿ” ಎಂಬ ಆಕರ್ಷಕ ಜಾಹೀರಾತುಗಳನ್ನು ನಂಬಿದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಆಘಾತಕಾರಿ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ ಎಂಬಾತನ ವಂಚನೆ ಪ್ರಕರಣ ಮಾಸುವ ಬೆನ್ನಲ್ಲೇ ಹಾವೇರಿಯಲ್ಲೂ ಅಮಾಯಕರಿಗೆ ವಂಚಿಸಿರೋ ಘಟನೆ ಬೆಳಕಿಗೆ ಬಂದಿದೆ. ಹಾವೇರಿ ನಗರದ ಅಶ್ವಿನಿ ನಗರದಲ್ಲಿ `ಎಸ್‌ಎಲ್‌ವಿ ಮಹಿಳಾ ಮಾರ್ಟ್ ಅಂಡ್ ಮಾರ್ಕೆಟಿಂಗ್’ ಹೆಸರಲ್ಲಿ ಕಚೇರಿ ತೆರೆದು ವರ್ಕ್ ಫ್ರಮ್ ಹೋಮ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಸಾವಿರಾರು ಮಹಿಳೆಯರಿಗೆ ವಂಚಿಸಿದ್ದಾರೆ. ಹಣ ಕಳೆದುಕೊಂಡವರು ನ್ಯಾಯಕೊಡಿಸುವಂತೆ ಠಾಣೆ ಮೆಟ್ಟಿಲೇರಿದ್ದಾರೆ. ಕೋಟ್ಯಾಂತರ ರೂಪಾಯಿ ವಂಚಿಸಿದ ವಿನಾಯಕ ಅನ್ವೇರಿ ಹಾಗೂ ರಮ್ಯಾ ಎಂಬುವವರು ಕಚೇರಿಗೆ ಬೀಗ ಹಾಕಿ ಎಸ್ಕೇಪ್ ಆಗಿದ್ದಾರೆ.
ಇದನ್ನೂ ಓದಿ:
ಇನ್ನೂ ಹಾವೇರಿಯ ಈ ಖತರ್ನಾಕ್ ಜೋಡಿ ಅಗರಬತ್ತಿ, ಮೇಣದ ಬತ್ತಿ, ಕರ್ಪೂರ, ಧೂಪ, ಇತರೆ ಸಾಮಗ್ರಿಗಳನ್ನು ಕೊಡುತ್ತೇವೆ. ನೀವು ಅದನ್ನು ಮನೆಯಲ್ಲೇ ಪ್ಯಾಕಿಂಗ್ ಮಾಡಿಕೊಡಬೇಕು. ರಾಜ್ಯದಲ್ಲಿ ನಮ್ಮದು 9 ಶಾಖೆಗಳಿವೆ, ಕನಿಷ್ಠ 25 ಸಾವಿರ ರೂ.ನಿಂದ 5 ಲಕ್ಷ ರೂ.ವರೆಗೆ ಡೆಪಾಸಿಟ್ ಇಡಬೇಕು. ಒಂದು ಲಕ್ಷಕ್ಕೆ ಪ್ರತಿ ತಿಂಗಳಿಗೆ 26 ಸಾವಿರ ರೂ. ಆದಾಯ ಕೊಡುತ್ತೇವೆ ಎಂದು ನಂಬಿಸಿ ಮೋಸ ಮಾಡಿದ್ದಾರೆ. ಅಂದಾಜು 10 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ನೊಂದ ಮಹಿಳೆಯರು ಆರೋಪಿಸ್ತಿದ್ದಾರೆ.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…
ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…