ಬಂಟ್ವಾಳ: ಹಾಸನದಲ್ಲಿ ಕಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಯುವಕ ಬಲಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ.
ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಚನ್ನರಾಯಪಟ್ಟನದ ಹಿರಿಸಾವೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಬಸ್ ನಲ್ಲಿ 45 ಜನ ಪ್ರಯಾಣಿಕರಿದ್ದು, ಇದರಲ್ಲಿ 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಭಾನುವಾರ ರಾತ್ರಿ ಮಾಣಿಯಿಂದ ಬಸ್ ಹತ್ತಿದ ಅಭಿಷೇಕ್ ಮುಂಜಾನೆಯ ವೇಳೆ ಬಸ್ ಪಲ್ಟಿಯಾಗಿ ಮೃತಪಟ್ಟಿದ್ದಾನೆ. ಅಭಿಷೇಕ್ ಅವರಿಗೆ ಬೆಂಗಳೂರಿನಲ್ಲಿನ ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಸಿಕ್ಕಿದ್ದು ಅವರು ಇಂದು ಕೆಲಸಕ್ಕೆ ಸೇರಬೇಕಾಗಿತ್ತು. ಇತ್ತೀಚೆಗೆ ಅವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು.
ಅವರ ಹತ್ತಿರದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಅವರ ಊರಿಗೆ ಬಂದಿದ್ದರು. ಮದುವೆ ಮುಗಿಸಿ ವಾಪಾಸು ಊರಿನಿಂದ ಬಸ್ ಮೂಲಕ ಬೆಂಗಳೂರಿಗೆ ತಮ್ಮನ ಜೊತೆಯಲ್ಲಿ ಪ್ರಯಾಣ ಬೆಳೆಸಿದ್ದ. ತಮ್ಮನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…