Featured

ಹಾಸನಾಂಬೆ ದೇಗುಲದ ಬಾಗಿಲು ಓಪನ್ : ಸುಗಮ ದರ್ಶನಕ್ಕೆ ವ್ಯವಸ್ಥೆ, ಇತರ ಸೇವೆ ವಿವರ ಇಲ್ಲಿದೆ – vishwanews24

ಹಾಸನಾಂಬೆ ದೇಗುಲದ ಬಾಗಿಲು ಓಪನ್ : ಸುಗಮ ದರ್ಶನಕ್ಕೆ ವ್ಯವಸ್ಥೆ, ಇತರ ಸೇವೆ ವಿವರ ಇಲ್ಲಿದೆ

ಹಾಸನ: ಹಾಸನದ ಹಾಸನಾಂಬ ದೇಗುಲದ ಗರ್ಭಗುಡಿ ಬಾಗಿಲು ಗುರುವಾರ ಮಧ್ಯಾಹ್ನ ತೆರೆಯಲಾಯಿತು. ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ಬಾಗಿಲು ತೆರೆಯಲಾಯಿತು. ಇಂದಿನಿಂದ ನವೆಂಬರ್ 3ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ನಾಳೆಯಿಂದ ನವೆಂಬರ್​ 2 ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಇದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸಚಿವ ರಾಜಣ್ಣ, ಶಾಸಕ ಸ್ವರೂಪ್‌ ಪ್ರಕಾಶ್, ಸಂಸದ ಶ್ರೇಯಸ್‌ ಪಟೇಲ್, ಹಾಸನ ಡಿಸಿ, ಪೊಲೀಸ್​ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ತೆರೆಯಲಾಯಿತು.

ಹಾಸನಾಂಬ ಜಾತ್ರೆಗೆ ಕೆಲವು ದಿನಗಳಿಂದ ಸಿದ್ಧತೆಗಳು ಭರದಿಂದ ಸಾಗಿದ್ದವು. ಸದ್ಯ ವಿಶೇಷ ಹೂವಿನ ಅಲಂಕಾರದಿಂದ ದೇವಸ್ಥಾನ ಕಂಗೊಳಿಸುತ್ತಿದೆ.

ಸುಗಮ ದರ್ಶನಕ್ಕೆ ಕ್ಯೂ ಆರ್ ಕೋಡ್ ವ್ಯವಸ್ಥೆ
ಕಳೆದ ಬಾರಿ ಶಕ್ತಿ ಯೋಜನೆಯ ಪರಿಣಾಮ ಕಾರಣದಿಂದ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಹಾಗು ಭಕ್ತರು ಆಗಮಿಸಿದ್ದರು. ಬರೊಬ್ಬರಿ 14 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಹಾಗಾಗಿ ಈ ವರ್ಷ ಕೂಡ ಸುಮಾರು 20ರಿಂದ 25 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯೊಂದಿಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುಮಾರು 10 ಕಿಲೋಮೀಟರ್ ಉದ್ದದ ಬ್ಯಾರಿಕೇಡ್ ವ್ಯವಸ್ಥೆ, ಸರತಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ನೆರಳಿನ ವ್ಯವಸ್ಥೆ, ಗಣ್ಯರು ಅತಿ ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಸುಗಮ ದರ್ಶನಕ್ಕೆ ಕ್ಯೂ ಆರ್ ಕೋಡ್ ವ್ಯವಸ್ಥೆಯನ್ನೂ ಮಾಡಲಾಗಿದೆ. ವಿಶೇಷ ದರ್ಶನಕ್ಕೆ ಪಾಸ್ ಪಡೆಯುವವರು, ಹಣ ನೀಡಿ ವಿಶೇಷ ಪಾಸ್ ಪಡೆದು ದರ್ಶನ ಮಾಡ ಬಯಸುವವರಿಗಾಗಿ ಕ್ಯೂ ಆರ್ ಕೋಡ್ ಒಳಗೊಂಡ ಪಾಸ್ ಮಾಡಲಾಗಿದ್ದು ಅವರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಸುವ ಸಾಧ್ಯತೆ ಹಿನ್ನೆಲೆಯಲ್ಲಿ ದಿನದ 24 ಗಂಟೆಯೂ ಕೂಡ ದೇವಿ ದರ್ಶನಕ್ಕೆ ಅವಕಾಶ ಇದ್ದು, ಅದಕ್ಕಾಗಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಲಿಪೊಲೀಸರು ಕಂದಾಯ ಇಲಾಖೆ ಸಿಬ್ಬಂದಿ, ಹಾಗೂ ಸ್ವಯಂಸೇವಕರನ್ನು ಸನ್ನದ್ಧಗೊಳಿಸಲಾಗಿದೆ.

ಹಾಸನಾಂಬ ದರ್ಶನ ಸಮಯ
ಸಾಮಾನ್ಯವಾಗಿ ಹಾಸನಾಂಬ ದೇಗುಲದಲ್ಲಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಬಾರಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಮಾತ್ರವಲ್ಲದೆ, ನೈವೇದ್ಯದ ಸಮಯ ಹೊರತುಪಡಿಸಿ ಉಳಿದಂತೆ ಎಲ್ಲಾ ಅವಧಿಯಲ್ಲೂ (ದಿನ ಪೂರ್ತಿ) ದರ್ಶನಕ್ಕೆ ಅವಕಾಶವಿದೆ.

ನೇರ ದರ್ಶನಕ್ಕೆ 1000 ರೂ. ಟಿಕೆಟ್
ನೇರ ದರ್ಶನ ಪಡೆಯ ಬಯಸುವ ಭಕ್ತರಿಗೆ 1000 ರೂ. ಟಿಕೆಟ್ 300 ರೂ. ಟಿಕೆಟ್ ಹಾಗೂ ವಿಶೇಷ ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸಾಮಾನ್ಯ ಭಕ್ತರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ದೇಗುಲವನ್ನು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಇಡೀ ದೇಗುಲದ ಆವರಣ ನಳ ನಳಿಸುವಂತೆ ಮಾಡಲಾಗಿದೆ. ಹಲವು ಹೈಟೆಕ್ ವ್ಯವಸ್ಥೆಗಳೊಂದಿಗೆ ಈ ವರ್ಷದ ಹಾಸನಾಂಬೆ ಉತ್ಸವ ಆರಂಭವಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago