ಹಾಸನ : ಆಜಾನ್ ವಿರುದ್ಧ ಶ್ರೀರಾಮಸೇನೆ ಸಂಘಟನೆ ವತಿಯಿಂದ ದೇವಸ್ಥಾನಗಳಲ್ಲಿ ರಾಮಜಪ, ಶಿವನಜಪ – Vishwanews24

Featured, ರಾಜ್ಯ ನ್ಯೂಸ್

ಹಾಸನ : ಆಜಾನ್ ವಿರುದ್ಧ ಶ್ರೀರಾಮಸೇನೆ ಸಂಘಟನೆ ವತಿಯಿಂದ ದೇವಸ್ಥಾನಗಳಲ್ಲಿ ರಾಮಜಪ, ಶಿವನಜಪ

ಹಾಸನ: ಆಜಾನ್ ವಿರುದ್ಧ ಶ್ರೀರಾಮಸೇನೆ ಸಂಘಟನೆ ವತಿಯಿಂದ ಹಾಸನದ ದೇವಸ್ಥಾನಗಳಲ್ಲಿ ರಾಮಜಪ, ಶಿವನಜಪ ಹಮ್ಮಿಕೊಳ್ಳಲಾಗಿದೆ.

ಹಾಸನದ ಸಂಗಮೇಶ್ವರ ಬಡಾವಣೆಯಲ್ಲಿರುವ, ಸಂಗಮೇಶ್ವರ ದೇವಾಲಯದಲ್ಲಿ ಇಂದಿನಿಂದ ಮೈಕ್ ಮೂಲಕ ದೇವರ ಜಪ ಮಾಡುವುದಕ್ಕೆ ಚಾಲನೆ ನೀಡಲಾಯಿತು. ಶ್ರೀರಾಮಸೇನೆ ಸಂಘಟನೆಯ ಜಿಲ್ಲಾಧ್ಯಕ್ಷ ಜಾನಕೆರೆ ಹೇಮಂತ್ ಮತ್ತು ಪ್ರಧಾನ ಕಾರ್ಯದರ್ಶಿ ಹೇಮಂತ್ ಬೇಲೂರು ಬೆಳಗ್ಗೆ ಐದು ಗಂಟೆಗೆ ಮೈಕ್ ಮೂಲಕ ರಾಮಜಪ, ಶಿವನಜಪ ಆರಂಭಿಸಿದರು.

ಇನ್ನು ಮುಂದೆ ಪ್ರತಿದಿನ ದೇವಾಲಯದಲ್ಲಿ ಸುಪ್ರಭಾತ, ಭಜನೆ, ರಾಮಜಪವನ್ನು ಮೈಕ್‍ನಲ್ಲಿ ಹಾಕಲಾಗುವುದು ಎಂದು ತಿಳಿಸಿದರು. ನಾವು ಮೈಕ್ ಮೂಲಕ ಸುಪ್ರಭಾತ, ಭಜನೆ, ಜಪ ಮಾಡಬಾರದು ಎಂದರೆ ಬೇರೆ ಧರ್ಮದವರಿಗೂ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದರು.

Leave a Reply