ಹಾಸನ : ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆಗೈದ ಕಾನ್‌ಸ್ಟೇಬಲ್ – vishwanews24

Featured, ರಾಜ್ಯ ನ್ಯೂಸ್

ಹಾಸನ : ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಹತ್ಯೆಗೈದ ಕಾನ್‌ಸ್ಟೇಬಲ್

ಹಾಸನ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್‌ಪಿಗೆ ದೂರು ನೀಡಲು ಬಂದಿದ್ದ ಪತ್ನಿಯನ್ನು ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ.

ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಎಂಬವರು ಪತ್ನಿ ಮಮತಾರನ್ನು ಎಸ್‌ಪಿ ಕಚೇರಿ ಆವರಣದಲ್ಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಚಾಕುವಿನಿಂದ ಇರಿದಿದ್ದನ್ನು ಕಂಡ ಪೊಲೀಸರು ತಕ್ಷಣವೇ ಮಮತಾರನ್ನು ಹಿಮ್ಸ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ . ಕೃತ್ಯದ ಬಳಿಕ ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಭಾರೀ ಮಳೆಗೆ ಭೂಕುಸಿತ ; 42 ಮಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ – vishwanews24

ಕಳೆದ ಕೆಲವು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದರಿಂದ ಸೋಮವಾರ ಪತಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಬಂದಿದ್ದ ಪತ್ನಿಯ ಮೇಲೆ ಸಿಟ್ಟಿಗೆದ್ದ ಲೋಕನಾಥ್ ದುಷ್ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

Leave a Reply