ಹಾಸನ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್‌ಪಿಗೆ ದೂರು ನೀಡಲು ಬಂದಿದ್ದ ಪತ್ನಿಯನ್ನು ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಪತಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ.
ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಎಂಬವರು ಪತ್ನಿ ಮಮತಾರನ್ನು ಎಸ್‌ಪಿ ಕಚೇರಿ ಆವರಣದಲ್ಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಚಾಕುವಿನಿಂದ ಇರಿದಿದ್ದನ್ನು ಕಂಡ ಪೊಲೀಸರು ತಕ್ಷಣವೇ ಮಮತಾರನ್ನು ಹಿಮ್ಸ್ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ . ಕೃತ್ಯದ ಬಳಿಕ ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ಕೆಲವು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದರಿಂದ ಸೋಮವಾರ ಪತಿ ವಿರುದ್ಧ ದೂರು ನೀಡಲು ಎಸ್‌ಪಿ ಕಚೇರಿಗೆ ಬಂದಿದ್ದ ಪತ್ನಿಯ ಮೇಲೆ ಸಿಟ್ಟಿಗೆದ್ದ ಲೋಕನಾಥ್ ದುಷ್ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…