ಹಾಸನ: ಹಾಸನ ಜಿಲ್ಲೆ ಬೇಲೂರು ಸಮೀಪ ಮಂಗಳವಾರ ಕೆಎಸ್‌ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ತಿರುವಿನಲ್ಲಿ ಕೆಎಸ್‌ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆ ಗೆ ಸಾಗಿಸೋ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾ ವಿಕಾಸ ಕಾಲೇಜಿನ ಪಿಯು ಕಾಲೇಜು ವಿದ್ಯಾರ್ಥಿಗಳಾಗಿದ್ದು. ಇವರು ಬೇಲೂರು ಪಟ್ಟಣದ ನಿವಾಸಿಗಳು. ಇವರೆಲ್ಲ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದರು. ಈ ವೇಳೆ ಚಿಕ್ಕಮಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ಸಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಮೊಹಮ್ಮದ್ ಜಲಾನಿ, ಅಕ್ಮಲ್ ಖಾನ್, ಕೈಫ್ ಸೇರಿ ಐವರು ಸಾವನ್ನಪ್ಪಿದ್ದಾರೆ. ಇನ್ನು ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…