ಹಾಸನ: ಕೋರ್ಟ್ ಹಿಜಬ್‍ಗೆ ಅವಕಾಶ ಕೊಡದಿದ್ರೆ, ನಾವು ಶಾಲೆಗೇ ಬರಲ್ಲ ಎಂದು ಹಾಸನದ ಬೇಲೂರಿನಲ್ಲಿ ವಿದ್ಯಾರ್ಥಿನಿಯರು ತಮ್ಮ ನಿರ್ಧಾರವನ್ನು ಖಡಕ್ಕಾಗಿ ಶಿಕ್ಷಕರಿಗೆ ತಿಳಿಸಿದ್ದಾರೆ.
ಇಂದು ಹಿಜಬ್ ಧರಿಸಿ ಶಾಲೆಗೆ ಬಂದ ಬೇಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಹಿಜಬ್ ತೆಗೆಯುವಂತೆ ಸೂಚಿಸಿದ್ದಾರೆ. ಆದರೆ ಶಾಲೆಯ ಮೈದಾನದಲ್ಲೇ ಕುಳಿತ ವಿದ್ಯಾರ್ಥಿನಿಯರು ಹಿಜಬ್ ತೆಗೆಯುವುದಿಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ.
ಈ ವೇಳೆ ವಾಗ್ವಾದ ನಡೆಸಿದ ಅವರು, ಹಿಜಬ್ ಹಾಕಲು ಅವಕಾಶ ಇಲ್ಲ ಎಂದು ಕೋರ್ಟ್ ತೀರ್ಪು ಕೊಟ್ಟರೆ ನಾವು ಶಾಲೆಗೇ ಬರಲ್ಲ. ಹಿಂದೂಗಳು ಹಣೆಗೆ ಕುಂಕುಮ ಇಡುತ್ತಾರೆ. ನಾವು ಅದನ್ನು ಪ್ರಶ್ನೆ ಮಾಡುತ್ತೇವಾ. ಹಿಜಬ್ ಹಾಕಿಕೊಂಡು ತಾನೇ ಬಂದಿದ್ದೇವೆ. ನಾವು ಅವರ ತಲೆ ಮೇಲೆ ಕುಳಿತಿದ್ದೇವಾ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಾತಿನ ವೇಳೆ ಅಲ್ಲಾಹೋ ಅಕ್ಬರ್ ಎಂದು ವಿದ್ಯಾರ್ಥಿನಿಯರು ಘೋಷಣೆ ಕೂಗಿದ್ದು, ವಿದ್ಯಾರ್ಥಿನಿಯರಿಗೆ ಆ ರೀತಿ ಕೂಗದಂತೆ ಶಿಕ್ಷಕರು ಸೂಚನೆ ನೀಡಿದ್ದಾರೆ. ಅಂತಿಮವಾಗಿ ಶಾಲೆಗೆ ಹಾಜರಾಗದೆ ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…