Featured

ಹಾಸನ : ಕೋರ್ಟ್ ಹಿಜಬ್‍ಗೆ ಅವಕಾಶ ಕೊಡದಿದ್ರೆ ನಾವು ಶಾಲೆಗೇ ಬರಲ್ಲ : ಮುಸ್ಲಿಂ ವಿದ್ಯಾರ್ಥಿಗಳು- Vishwanews24

ಹಾಸನ : ಕೋರ್ಟ್ ಹಿಜಬ್‍ಗೆ ಅವಕಾಶ ಕೊಡದಿದ್ರೆ, ನಾವು ಶಾಲೆಗೇ ಬರಲ್ಲ ..

ಹಿಂದೂಗಳು ಹಣೆಗೆ ಕುಂಕುಮ ಇಡುತ್ತಾರೆ. ನಾವು ಅದನ್ನು ಪ್ರಶ್ನೆ ಮಾಡುತ್ತೇವಾ ?

ಹಾಸನ: ಕೋರ್ಟ್ ಹಿಜಬ್‍ಗೆ ಅವಕಾಶ ಕೊಡದಿದ್ರೆ, ನಾವು ಶಾಲೆಗೇ ಬರಲ್ಲ ಎಂದು ಹಾಸನದ ಬೇಲೂರಿನಲ್ಲಿ ವಿದ್ಯಾರ್ಥಿನಿಯರು ತಮ್ಮ ನಿರ್ಧಾರವನ್ನು ಖಡಕ್ಕಾಗಿ ಶಿಕ್ಷಕರಿಗೆ ತಿಳಿಸಿದ್ದಾರೆ.

ಇಂದು ಹಿಜಬ್ ಧರಿಸಿ ಶಾಲೆಗೆ ಬಂದ ಬೇಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಹಿಜಬ್ ತೆಗೆಯುವಂತೆ ಸೂಚಿಸಿದ್ದಾರೆ. ಆದರೆ ಶಾಲೆಯ ಮೈದಾನದಲ್ಲೇ ಕುಳಿತ ವಿದ್ಯಾರ್ಥಿನಿಯರು ಹಿಜಬ್ ತೆಗೆಯುವುದಿಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ.

ಈ ವೇಳೆ ವಾಗ್ವಾದ ನಡೆಸಿದ ಅವರು, ಹಿಜಬ್ ಹಾಕಲು ಅವಕಾಶ ಇಲ್ಲ ಎಂದು ಕೋರ್ಟ್ ತೀರ್ಪು ಕೊಟ್ಟರೆ ನಾವು ಶಾಲೆಗೇ ಬರಲ್ಲ. ಹಿಂದೂಗಳು ಹಣೆಗೆ ಕುಂಕುಮ ಇಡುತ್ತಾರೆ. ನಾವು ಅದನ್ನು ಪ್ರಶ್ನೆ ಮಾಡುತ್ತೇವಾ. ಹಿಜಬ್ ಹಾಕಿಕೊಂಡು ತಾನೇ ಬಂದಿದ್ದೇವೆ. ನಾವು ಅವರ ತಲೆ ಮೇಲೆ ಕುಳಿತಿದ್ದೇವಾ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಮಾತಿನ ವೇಳೆ ಅಲ್ಲಾಹೋ ಅಕ್ಬರ್ ಎಂದು ವಿದ್ಯಾರ್ಥಿನಿಯರು ಘೋಷಣೆ ಕೂಗಿದ್ದು, ವಿದ್ಯಾರ್ಥಿನಿಯರಿಗೆ ಆ ರೀತಿ ಕೂಗದಂತೆ ಶಿಕ್ಷಕರು ಸೂಚನೆ ನೀಡಿದ್ದಾರೆ. ಅಂತಿಮವಾಗಿ ಶಾಲೆಗೆ ಹಾಜರಾಗದೆ ವಿದ್ಯಾರ್ಥಿನಿಯರು ಮನೆಗೆ ತೆರಳಿದ್ದಾರೆ.

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

8 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago